Home News Hubballi: ಹುಬ್ಬಳ್ಳಿ ಗಲಭೆ ಸೇರಿ 43 ಕ್ರಿಮಿನಲ್‌ ಕೇಸ್‌ ಹಿಂದಕ್ಕೆ ಪಡೆದ ರಾಜ್ಯ ಸರಕಾರದ ಆದೇಶ...

Hubballi: ಹುಬ್ಬಳ್ಳಿ ಗಲಭೆ ಸೇರಿ 43 ಕ್ರಿಮಿನಲ್‌ ಕೇಸ್‌ ಹಿಂದಕ್ಕೆ ಪಡೆದ ರಾಜ್ಯ ಸರಕಾರದ ಆದೇಶ ರದ್ದು: ಕರ್ನಾಟಕ ಹೈಕೋರ್ಟ್‌ನಿಂದ ಮಹತ್ವದ ಆದೇಶ

High Court

Hindu neighbor gifts plot of land

Hindu neighbour gifts land to Muslim journalist

Hubballi Riot: ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆದ ಕರ್ನಾಟಕ ರಾಜ್ಯ ಸರಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ರದ್ದು ಮಾಡಿದೆ.

ಅ.10,2024 ರಂದು ರಾಜ್ಯ ಸರಕಾರ ಸಂಘಟನಾ ಹೋರಾಟಗಾರರು, ರಾಜಕಾರಣಿಗಳು ಸೇರಿ 43 ಪ್ರಕರಣಗಳನ್ನು ರಾಜ್ಯ ಸರಕಾರ ರದ್ದು ಮಾಡಿತ್ತು. ಸರಕಾರದ ಈ ಕ್ರಮವನ್ನು ಪ್ರಶ್ನೆ ಮಾಡಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಇಂದು ಸರಕಾರದ ಆದೇಶವನ್ನು ದ್ವಿಸದಸ್ಯ ಪೀಠ ರದ್ದು ಮಾಡಿದೆ.

ಪಿಐಎಲ್‌ ವಿಚಾರಣೆಯ ಸಂದರ್ಭದಲ್ಲೇ ಕೋರ್ಟ್‌ ಸಚಿವ ಸಂಪುಟದ ಕ್ರಮ ನಿಯಮಬಾಹಿರವಾಗಿದ್ದರೆ ಒಪ್ಪುವುದಿಲ್ಲ. ಪ್ರಕರಣಗಳನ್ನು ಹಿಂಪಡೆಯಲು ಅನುಮತಿ ನೀಡುವುದಿಲ್ಲ ಎಂದು ಹೇಳಿತ್ತು.

ಪ್ರಕರಣವೇನು? 

ಎಪ್ರಿಲ್‌ 16,2022 ರಂದು ಯುವಕನೋರ್ವ ವಿವಾದಾತ್ಮಕ ಪೋಸ್ಟನ್ನು ಹಾಕಿದ್ದ. ಈ ವಿಚಾರಕ್ಕೆ ಗಲಭೆ ನಡೆದಿತ್ತು. ಹಳೆ ಹುಬ್ಬಳ್ಳಿ ಠಾಣೆ ಎದುರು ಪೊಲೀಸರು ವಾಹನಗಳ ಮೇಲೆ ಕಲ್ಲು ತೂರಾ ಮಾಡಿದ್ದರು. ಈ ಸಂಬಂಧ ಎಫ್‌ಐಆರ್‌ ದಾಖಲಾಗಿ 155 ಮಂದಿ ಮೇಲೆ ಕೇಸು ದಾಖಲು ಮಾಡಲಾಗಿತ್ತು. 10 ಕ್ಕೂ ಹೆಚ್ಚು ಪೊಲೀಸ್‌ ವಾಹನಗಳಿಗೆ ಹಾನಿಯಾಗಿತ್ತು. ಜೊತೆಗೆ ಇಬ್ಬರು ಪೊಲೀಸ್‌ ಸಿಬ್ಬಂದಿ ಗಾಯಗೊಂಡಿದ್ದರು.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್‌ ಸಭೆಯಲ್ಲಿ ಹುಬ್ಬಳ್ಳಿ ಗಲಭೆಯಲ್ಲಿ ದಾಖಲಾಗಿದ್ದವರ ಮೇಲಿನ ಪ್ರಕರಣವನ್ನು ವಾಪಸ್‌ ಪಡೆಯುವ ನಿರ್ಧಾರ ಕೈಗೊಳ್ಳಲಾಗಿತ್ತು. ಮುಸ್ಲಿಮರನ್ನು ಓಲೈಕೆ ಮಾಡಲು ಈ ಕೇಸ್‌ ಹಿಂಪಡೆಯಲಾಗಿದೆ ಎಂದು ಬಿಜೆಪಿ ಪ್ರತಿಭಟನೆ ಮಾಡಿತ್ತು.