Home News Guruvayanakere : ಮುಸ್ಲಿಮರೊಂದಿಗಿನ ವ್ಯವಹಾರಗಳನ್ನು ನಿಲ್ಲಿಸಿ – ಗ್ರಾ ಪಂ ಅಧ್ಯಕ್ಷೆ ಭಾರತೀ ಶೆಟ್ಟಿ ವಿವಾದಾತ್ಮಕ...

Guruvayanakere : ಮುಸ್ಲಿಮರೊಂದಿಗಿನ ವ್ಯವಹಾರಗಳನ್ನು ನಿಲ್ಲಿಸಿ – ಗ್ರಾ ಪಂ ಅಧ್ಯಕ್ಷೆ ಭಾರತೀ ಶೆಟ್ಟಿ ವಿವಾದಾತ್ಮಕ ಭಾಷಣ

Hindu neighbor gifts plot of land

Hindu neighbour gifts land to Muslim journalist

Guruvayanakere : ಮುಸ್ಲಿಮರೊಂದಿಗೆ ಎಲ್ಲಾ ರೀತಿಯ ವ್ಯವಹಾರಗಳನ್ನು ನಿಲ್ಲಿಸಿ ಎಂದು ಗುರುವಾಯನಕೆರೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಹೌದು, ಗುರುವಾಯನಕೆರೆಯ ಬಂಟರ ಭವನದಲ್ಲಿ ಸಾಯಿರಾಮ್ ಫ್ರೆಂಡ್ಸ್ ಗುರುವಾಯನಕೆರೆ ಇದರ ವತಿಯಿಂದ ನಡೆದ ಸುಹಾಸ್ ಶೆಟ್ಟಿ ನುಡಿನಮನ ಕಾರ್ಯಕ್ರಮದಲ್ಲಿ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಭಾರತಿ ಶೆಟ್ಟಿ ಈ ವಿವಾದಿತ ಭಾಷಣ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು “ಯಾವುದೇ ವಸ್ತುಗಳಿಗೆ ದರ ಸ್ವಲ್ಪ ಜಾಸ್ತಿಯಾದರೂ ನಮ್ಮವರ ಅಂಗಡಿಯಲ್ಲಿಯೇ ಖರೀದಿಸಿ ಅದು ಹಿಂದೂ ಸಮುದಾಯಕ್ಕೆ ಶಕ್ತಿ ತುಂಬುತ್ತದೆ. ಅದರಲ್ಲಿ ಒಂದಿಷ್ಟು ಹಣವಾದರೂ ಅವರು ಸಂಘಟನೆಗಳಿಗೂ ನೀಡುತ್ತಾರೆ. ಬಹಳ ಚೆನ್ನಾಗಿ ಮಾತನಾಡುತ್ತಾರೆ ಎಂದು ಅವರ ಮಾತನ್ನು ಕೇಳಿ ಅಲ್ಲಿ ದರ ಕಡಿಮೆಯಿದೆ ಎಂದು ಅವರ ಅಂಗಡಿಗಳಿಗೆ ಹೋಗಬೇಡಿ ನಮ್ಮವರ ಅಂಗಡಿಯಲ್ಲಿಯೇ ಖರೀದಿಸಿ” ಎಂದು ಕರೆ ನೀಡಿದ್ದಾರೆ.

ಅಲ್ಲದೆ”ಗುರುವಾಯನಕೆರೆ ಪೇಟೆಯಲ್ಲಿ ಅವರ ರಿಕ್ಷಾ ಚಾಲಕರೇ ಹೆಚ್ಚಾಗಿದ್ದಾರೆ. ಬೆಳಗ್ಗಿನ ಜಾವ ಗುರುವಾಯನಕೆರೆಗೆ ಬಂದರೆ ಅಲ್ಲಿ ನಮ್ಮ ರಿಕ್ಷಾ ಚಾಲಕರು ಚಲಾಯಿಸುವ ರಿಕ್ಷಾಗಳೇ ಇರುವುದಿಲ್ಲ ಇದರಿಂದ ಸಮಸ್ಯೆಯಾಗುತ್ತಿದೆ. ಆದ್ದರಿಂದ ಹಿಂದೂ ರಿಕ್ಷಾ ಚಾಲಕರು ಒಬ್ಬರಾದರೂ ಬೆಳಗ್ಗಿನ ಜಾವ ಅಲ್ಲಿರಬೇಕು, ಹೀಗೆಲ್ಲ ಹಿಂದೂಗಳನ್ನು ಜಾಗೃತರಾಗಿಸುವ ಮೂಲಕ ಅವರನ್ನು ಕಟ್ಟಿ ಹಾಕಬಹುದೇ ಹೊರತು ಇನ್ಯಾವ ರೀತಿಯಲ್ಲೂ ಅಲ್ಲ” ಎಂದು ಭಾರತಿ ಶೆಟ್ಟಿ ಹೇಳಿದ್ದಾರೆ.

ವೇದಿಕೆಯ ಮೇಲೆ ಬೆಳ್ತಂಗಡಿ ಕ್ಷೇತ್ರದ ಶಾಸಕರು ಸೇರಿ, ಅನೇಕ ಗಣ್ಯಮಾನ್ಯರು ಉಪಸ್ಥಿತರಿದ್ದರು. ಸಧ್ಯ ವಿವಾದಿತ ಭಾಷಣ ಮಾಡಿದ ವೀಡಿಯೊ ಇದೀಗ ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.