Home News Muniratna: ಕಚೇರಿಯಲ್ಲೇ ಬೆತ್ತಲೆಗೊಳಿಸಿ ಅತ್ಯಾಚಾರ, ಮುಖದ ಮೇಲೆ ಮೂತ್ರ ವಿಸರ್ಜನೆ – ಶಾಸಕ ಮುನಿರತ್ನ ವಿರುದ್ಧ...

Muniratna: ಕಚೇರಿಯಲ್ಲೇ ಬೆತ್ತಲೆಗೊಳಿಸಿ ಅತ್ಯಾಚಾರ, ಮುಖದ ಮೇಲೆ ಮೂತ್ರ ವಿಸರ್ಜನೆ – ಶಾಸಕ ಮುನಿರತ್ನ ವಿರುದ್ಧ ಮತ್ತೊಂದು FIR

Hindu neighbor gifts plot of land

Hindu neighbour gifts land to Muslim journalist

Muniratna: ಅತ್ಯಾಚಾರ ನಡೆಸಿದ ಆರೋಪದ ಅಡಿ ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.

ಹೌದು, ಅತ್ಯಾಪ್ತರಿಂದ ಅತ್ಯಾಚಾರ ಮಾಡಿಸಿದ್ದೂ ಅಲ್ಲದೇ ಮುಖದ ಮೇಲೆ ಮೂರ್ತ ವಿಸರ್ಜನೆ ಮಾಡಿಸಿ ಬಿಜೆಪಿ ಶಾಸಕ ಮುನಿರತ್ನ ಹೀನಾಯವಾಗಿ ನಡೆಸಿಕೊಂಡಿದ್ದು, ಈ ಅಪಮಾನ ಸಹಿಸಲು ಆಗುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತೆ ವೀಡಿಯೋದಲ್ಲಿ ಗಂಭೀರ ಆರೋಪ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಈ ಸಂಬಂಧ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಹಾಗೂ ಮೂವರು ಬೆಂಬಲಿಗರ ವಿರುದ್ಧ 40 ವರ್ಷದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅನ್ವಯ ಆರ್‌ಎಂಸಿ ಯಾರ್ಡ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ 40 ವರ್ಷದ ಮಹಿಳೆ ದೂರು ನೀಡಿದ್ದು, ಮುನಿರತ್ನ, ವಸಂತ, ಚನ್ನಕೇಶ, ಕಮಲ್ ವಿರುದ್ಧ ಆರ್‌ಎಂಸಿ ಯಾರ್ಡ್‌ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಪ್ರಕರಣ ದಾಖಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಘಟನೆಯು 2023ರಲ್ಲಿ ನಡೆದಿತ್ತು ಎಂದು ಮಹಿಳೆ ತಿಳಿಸಿದ್ದಾರೆ. ಆರೋಪಿಗಳು ಬೆದರಿಕೆ ಹಾಕಿದ್ದರಿಂದ ಹೆದರಿ ದೂರು ನೀಡಿರಲಿಲ್ಲ. ಈಗ ದೂರು ನೀಡುತ್ತಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಈ ಹಿಂದೆ ಬಿಜೆಪಿಯಲ್ಲಿ ಕೆಲಸ ಮಾಡುತ್ತಿದ್ದೆ. ಪತಿ ಬಿಟ್ಟು ಹೋಗಿದ್ದರಿಂದ ಮತ್ತೊಬ್ಬರನ್ನು ಮದುವೆ ಆಗಿ ಜೀವನ ನಡೆಸುತ್ತಿದ್ದೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ ಹೊರಿಸಿ ನನ್ನನ್ನು ಜೈಲಿಗೆ ಕಳುಹಿಸಿದ್ದರು. ಜಾಮೀನು ಪಡೆದು ಜೈಲಿನಿಂದ ಹೊರಬಂದ ಬಳಿಕ ಅವರ ಬೆಂಬಲಿಗರು ಬಂದು ಪ್ರಕರಣ ಇತ್ಯರ್ಥ ಪಡಿಸಿಕೊಳ್ಳುವ ಆಮಿಷವೊಡ್ಡಿದ್ದರು. ನಂತರ, ಶಾಸಕರ ಕಚೇರಿಗೆ ಕರೆದೊಯ್ದು ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದರು ಎಂದು ಸಂತ್ರಸ್ತೆ ನೀಡಿದ ದೂರು ಆಧರಿಸಿ ಎಫ್‌ಐಆರ್‌ನಲ್ಲಿ’ ದಾಖಲಿಸಲಾಗಿದೆ.

ಅಲ್ಲದೆ ಮುನಿರತ್ನ ಅವರು ನನ್ನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದರು. ಬಳಿಕ, ಬಿಳಿ ಬಣ್ಣದ ಬಾಕ್ಸ್‌ನಲ್ಲಿದ್ದ ದ್ರವ ತೆಗೆದು ನನ್ನ ಎಡಭಾಗದ ಕೈಗೆ ಚುಚ್ಚಿ, ಜೀವನಪರ್ಯಂತ ನರಳುತ್ತೀಯಾ ಎಂದು ಹೇಳಿ ಬೆದರಿಸಿದ್ದರು. 2025ರ ಜನವರಿ 14ರಂದು ಹೊಟ್ಟೆನೋವಿಗೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ತೆರಳಿದಾಗ ಇಡಿಆರ್‌ ವೈರಸ್‌ ಕಾಯಿಲೆ ಇರುವುದಾಗಿ ಪತ್ತೆಯಾಗಿತ್ತು. ಇದು ವಾಸಿಯಾಗದ ಕಾಯಿಲೆ ಎಂದು ವರದಿಯಲ್ಲಿ ವೈದ್ಯರು ತಿಳಿಸಿದ್ದಾರೆ ಎಂದು ವಿವರಿಸಲಾಗಿದೆ.