ಸೋಮವಾರ, 26 ಅಕ್ಟೋಬರ್ 2026
Trending

ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಕೊಡಗಿನ ವಿದ್ಯಾರ್ಥಿನಿಗೆ ದ್ವಿತೀಯ ಸ್ಥಾನ

ಬೆಂಗಳೂರು: ಕೊಡಗು ಜಿಲ್ಲೆಯ ಲಯನ್ಸ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು. ಸಿಂಚನಾ, 10ನೇ ತರಗತಿ, ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲೆಗೆ ಹಾಗೂ ಶಾಲೆಗೆ ಹೆಮ್ಮೆ ತಂದಿದ್ದಾರೆ.

Sponsored

ಬೆಂಗಳೂರಿನ ಬನಶಂಕರಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಇಲಾಖೆ (DSERT) ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಕು.ಸಿಂಚನಾ ಭಾಗವಹಿಸಿದ್ದರು.ಅವರು ‘ನೀರಿನ ನಿರ್ವಹಣೆ ಮತ್ತು ಸಂರಕ್ಷಣೆ’ (Water Management and Conservation) ವಿಷಯವನ್ನು ಆಧರಿಸಿ ತಮ್ಮ ವಿಜ್ಞಾನ ಮಾದರಿಯನ್ನು ಪ್ರದರ್ಶಿಸಿದರು.

Advertisement
Advertisement

ಕೊಡಗು ಜಿಲ್ಲೆಯಿಂದ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾದ ಏಕೈಕ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಕು.ಸಿಂಚನಾ, ತಮ್ಮ ಮಾದರಿಯ ಮೂಲಕ ನೀರಿನ ಸಮರ್ಪಕ ಬಳಕೆ, ನಿರ್ವಹಣೆ ಹಾಗೂ ಸಂರಕ್ಷಣೆಯ ಮಹತ್ವವನ್ನು ಮನದಟ್ಟು ಮಾಡಿಕೊಟ್ಟರು.

ಕು.ಸಿಂಚನಾ ಅವರ ಈ ಸಾಧನೆಗೆ ಲಯನ್ಸ್ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದು, ಅವರ ಮುಂದಿನ ಶೈಕ್ಷಣಿಕ ಹಾಗೂ ವೈಜ್ಞಾನಿಕ ಸಾಧನೆಗಳಿಗೆ ಶುಭ ಹಾರೈಸಿದ್ದಾರೆ.

ಕೊಡಗು ಜಿಲ್ಲೆಯ ಹೆಮ್ಮೆಯಾಗಿ ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಕು.ಸಿಂಚನಾ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

Advertisement