ಮಂಗಳವಾರ, 27 ಅಕ್ಟೋಬರ್ 2026
Trending

ಶಾಕಿಂಗ್ ನ್ಯೂಸ್ : ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ!!!

ಹಾಸ್ಟೆಲ್‌ವೊಂದರಲ್ಲಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ತುಮಕೂರಿನ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಸಾವು ಕಂಡ ಯುವತಿ ಇಂಜಿನಿಯರಿಂಗ್ ವಿದ್ಯಾರ್ಥಿನಿ.

Sponsored

ಮೈಸೂರು ಮೂಲದ ಕವಿತಾ (21) ಎಂಬ ಯುವತಿಯೇ ಮೃತ ವಿದ್ಯಾರ್ಥಿನಿ. ಅಂತಿಮ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದ ಈಕೆ, ನಿನ್ನೆ ಮಧ್ಯರಾತ್ರಿ ಕಾಲೇಜು ಸಂಗಮಿತ್ರ ಬ್ಲಾಕ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

Advertisement
Advertisement

ಫೈನಲ್ ಇಯರ್ ಸಿವಿಲ್ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಕವಿತಾ, ಕಾಲೇಜು ಹಾಸ್ಟೆಲ್ ನ ಸಂಗಮಿತ್ರ ಬ್ಲಾಕ್ ನಲ್ಲಿ ವಾಸವಾಗಿದ್ದಳು. ರಾತ್ರಿ ಸುಮಾರು 12.30ರ ವೇಳೆಗೆ ಈ ಘಟನೆ ನಡೆದಿದೆ. ಕವಿತಾ ಪೋಷಕರಿಗೆ ಸಾವಿನ ವಿಷಯ ತಿಳಿಸಲಾಗಿದೆ.

ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement