# Karkala: ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ; ಎನ್‌ಐಎ ತನಿಖೆಗೆ ಆಗ್ರಹಿಸಿ ದ.ಕ.ಉಡುಪಿ ಶಾಸಕರಿಂದ ರಾಜ್ಯಪಾಲರ ಭೇಟಿ!

- Link: https://hosakannada.com/news/suhas-shetty-murder-case-d-k-udupi-mla-meets-governor-demands-nia-investigation/
- Published: 2025-05-08T10:48:31+00:00
- Author: ಹೊಸಕನ್ನಡ ನ್ಯೂಸ್

Karkala: ಸುಹಾಸ್‌ ಶೆಟ್ಟಿ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಬೇಕೆಂದು ಒತ್ತಾಯಿಸಿ
ದಕ್ಷಿಣ ಕನ್ನಡ ಮತ್ತು ಉಡುಪಿ ಶಾಸಕರು ಮೇ 9 ರಂದು ರಾಜ್ಯಪಾಲರನ್ನು ಭೇಟಿ ಮಾಡಲಿದ್ದಾರೆ.

Sponsored

ರಾಷ್ಟ್ರೀಯ ತನಿಖಾ ಸಂಸ್ಥೆಯಂತಹ ಸಮಗ್ರ ತನಿಖೆಯಿಂದ ಮಾತ್ರ ಸಂಪೂರ್ಣ ಸತ್ಯ ಹೊರಬರಲು ಸಾಧ್ಯ. ಆದರೆ
ಇಂತಹ ನಿರ್ಧಾರ ತೆಗೆದುಕೊಳ್ಳಲು ರಾಜ್ಯ ಸರಕಾರದಿಂದ ಹೆಚ್ಚಿನ ಇಚ್ಛಾಶಕ್ತಿ ಇಲ್ಲ ಎಂದು ತೋರುತ್ತದೆ.
ಆದ್ದರಿಂದ ಎರಡೂ ಕರಾವಳಿ ಜಿಲ್ಲೆಗಳ ಶಾಸಕರು ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ರಾಜ್ಯಪಾಲರನ್ನು
ಒತ್ತಾಯಿಸಲಿದ್ದಾರೆ ಎಂದು ಶಾಸಕ ಸುನಿಲ್‌ ಕುಮಾರ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement

Advertisement
