

ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದಲ್ಲಿ ನಡೆದಿದೆ.
ಬಂಗ್ಲೆಗುಡ್ಡೆ ಲಿಖಿತ್(22) ಮೃತಪಟ್ಟ ಯುವಕ.
ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮನೆಯ ಅಡ್ಡಕ್ಕೆ ಹಗ್ಗ ಹಾಕಿ ನೇಣು ಹಾಕಿಕೊಂಡಿದ್ದಾನೆ. ನಂತರ ಮನೆಯವರು ಆತನನ್ನು ಕೂಡಲೇ ಸಂಪಾಜೆ ಆರೋಗ್ಯ ಕೇಂದ್ರಕ್ಕೆ ಕರೆತಂದು ಅಲ್ಲಿಂದ ಸುಳ್ಯ ಸರಕಾರಿ ಆಸ್ಪತ್ರೆಗೆ ತಂದಿದ್ದರು. ಪರೀಕ್ಷೆ ನಡೆಸಿದ ವೈದ್ಯರು ಆತ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.













