ಸುಳ್ಯ: ಸುಳ್ಯ ತಾಲೂಕು ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ, ಕಚೇರಿಯ ವಿವಿಧ ವಿಭಾಗಗಳ ದಾಖಲೆಗಳು ಹಾಗೂ ಅರ್ಜಿಗಳ ವಿಲೇವಾರಿ ಪ್ರಕ್ರಿಯೆಯನ್ನು ಪರಿಶೀಲನೆ ನಡೆಸಿದ್ರು.
ಉಡುಪಿ ಲೋಕಾಯುಕ್ತ ಡಿವೈಎಸ್‌ಪಿ ಹಾಲ್ ಮೂರ್ತಿ ರಾವ್ ನೇತೃತ್ವದ ತಂಡ ತಾಲೂಕು ಕಚೇರಿಗೆ ಭೇಟಿ ನೀಡಿ, ಸಿಬ್ಬಂದಿಯಿಂದ ವಿವಿಧ ದಾಖಲೆಗಳ ಕುರಿತು ಮಾಹಿತಿ ಪಡೆದುಕೊಂಡರು
ಈ ವೇಳೆ ಕಚೇರಿ ಕೆಲಸಕ್ಕಾಗಿ ಆಗಮಿಸಿದ್ದ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಲೋಕಾಯುಕ್ತ ಅಧಿಕಾರಿಗಳ ಮುಂದೆ ತೆರೆದಿಟ್ಟರು. ಸಾರ್ವಜನಿಕರಿಂದ ಅಹವಾಲು ಆಲಿಸಿದ ಅಧಿಕಾರಿಗಳು, ಸಂಬಂಧಪಟ್ಟ ವಿಭಾಗದ ಸಿಬ್ಬಂದಿಯನ್ನು ಕರೆಸಿ ಸಮಸ್ಯೆಗಳ ಕುರಿತು ವಿಚಾರಣೆ ನಡೆಸಿದರು.
ಅರ್ಜಿಗಳ ವಿಲೇವಾರಿಗೆ ವಿಳಂಬವಾಗುತ್ತಿರುವ ಕುರಿತು ಕೂಡ ಸಿಬ್ಬಂದಿಯನ್ನು ಪ್ರಶ್ನಿಸಿದ ಅಧಿಕಾರಿಗಳು, ವಿಳಂಬಕ್ಕೆ ಕಾರಣವೇನು ಎಂಬುದರ ಬಗ್ಗೆ ಮಾಹಿತಿ ಪಡೆದರು.
ಲೋಕಾಯುಕ್ತ ಡಿವೈಎಸ್‌ಪಿ ನೇತೃತ್ವದ ತಂಡದಲ್ಲಿ ನಾಗೇಶ್ ಉಡುಪ, ನಾಗರಾಜ್, ಪುಷ್ಪಾವತಿ, ಸುದೀಪ್ ಹಾಗೂ ರವಿ ಉಪಸ್ಥಿತರಿದ್ದರು.
ಸುಳ್ಯ ತಾಲೂಕು ಕಚೇರಿಗೆ ಲೋಕಾಯುಕ್ತಅಧಿಕಾರಿಗಳ ಭೇಟಿ




