ಮೇಘಾಲಯ ಹನಿಮೂನ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೋನಮ್ ರಘುವಂಶಿ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ.
ಕೆಲವು ದಿನಗಳ ಹಿಂದಷ್ಟೇ ವಿಚಾರಣಾ ನ್ಯಾಯಾಲಯ ಆರೋಪಿಗೆ ಜಾಮೀನು ಮಂಜೂರು ಮಾಡಿದ್ದನ್ನು ಮೇಘಾಲಯ ಹೈಕೋರ್ಟ್ ಎತ್ತಿಹಿಡಿದಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಎಂ. ಸುಂದ್ರೇಶ್ ಮತ್ತು ನ್ಯಾಯಮೂರ್ತಿ ಪಿ.ಬಿ. ವರಾಲೆ ಅವರನ್ನೊಳಗೊಂಡ ಪೀಠ ಜಾಮೀನು ರದ್ದುಗೊಳಿಸಿದೆ. ಪೊಲೀಸರ ಮುಂದೆ ಶರಣಾಗಲು ಆರೋಪಿಗೆ ಮೂರು ವಾರಗಳ ಕಾಲಾವಕಾಶ ನೀಡಿದೆ
ಜಾಮೀನು ರದ್ದುಗೊಳಿಸುವಾಗ, ಸೋನಮ್ ವಿರುದ್ಧದ ಆರೋಪಗಳು ಸಾಕಷ್ಟು ಗಂಭೀರ ಸ್ವರೂಪದ್ದಾಗಿವೆ. ವಿಚಾರಣಾ ಪ್ರಕ್ರಿಯೆಗಳು ಪೂರ್ಣಗೊಳ್ಳದಿದ್ದರೆ ಆರು ತಿಂಗಳ ನಂತರ ಮತ್ತೆ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ಪೀಠ ಹೇಳಿದೆ.




