ಶನಿವಾರ, 24 ಅಕ್ಟೋಬರ್ 2026

ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ದಶಕಗಳಿಂದ ರಾಜ್ಯದಲ್ಲಿ ಸುದ್ದಿಯಲ್ಲಿರುವ, ಬಗೆಹರಿಯದೆ ಉಳಿದಿರುವ ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಬುಧವಾರ (ಜು.22) ಆದೇಶಿಸಿದೆ.

 ಸೌಜನ್ಯ ಪ್ರಕರಣದ ಮುರು ತನಿಖೆ ಆರಂಭಿಸಬೇಕು ಹಾಗೆಯೇ ಆರೋಪಿ ಸಂತೋಷ್​ ರಾವ್​ ನನ್ನು ಪ್ರಕರಣದಿಂದ ಖುಲಾಸೆಗೊಳಿಸಿದ್ದ ಸಿಬಿಐ ವಿಶೇಷ ನ್ಯಾಯಾಲಯದ ಆದೇಶವನ್ನು ರದ್ದು ಪಡಿಸಬೇಕೆಂದು ಕೋರಿ ಸೌಜನ್ಯಾ ತಾಯಿ ಕುಸುಮಾವತಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಳು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್​ ನ್ಯಾಯಪೀಠ, ಸಿಬಿಐ ಅಧಿಕಾರಿಗಳು ಘಟನಾ ಸ್ಥಳಕ್ಕೆ ಬೇಟಿ ನೀಡದೆ ವರದಿ ಸಲ್ಲಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಸಿಬಿಐ ಅಧಿಕಾರಿಗಳನ್ನು ಸುಪ್ರೀಂ ಕೋರ್ಟ್​ ತರಾಟೆಗೆ ತೆಗೆದುಕೊಂಡಿದೆ.

ಸುಪ್ರೀಮ್ ಕೋರ್ಟ್ ನ್ಯಾ. ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ, ತನಿಖಾಧಿಕಾರಿ ಘಟನಾ ಸ್ಥಳಕ್ಕೆ ಯಾಕೆ ಹೋಗಿಲ್ಲ ಎಂದು ಪ್ರಶ್ನಿಸಿದ್ದು, ಹದಿನಾಲ್ಕು ವರ್ಷ ಆಯಿತು. ಸರಿಯಾದ ತನಿಖೆಯಾಗಿಲ್ಲ. ಸಾಕ್ಷ್ಯಗಳಿಗೆ ಭದ್ರತೆ ಮಂದುವರಿಸಿ. ಆದೇಶ ಮಾಡಿದ ಬಳಿಕ ಮಧ್ಯಂತರ ವರದಿ ಕೇಳುತ್ತೇವೆ. ಎಸ್‌ಐಟಿ ರಚನೆಯ ಬಗ್ಗೆ ನಾವು ನಿರ್ಧರಿಸುತ್ತೇವೆ ಎಂದು ತಿಳಿಸಿದೆ. ಅಲ್ಲದೆ ಪ್ರಕರಣದ ಮರುತನಿಖೆಗೆ ಸಮ್ಮತಿ ಸೂಚಿಸಿರುವ ಸ್ಯುಪ್ರೀಂ ಕೋರ್ಟ್, ಮರುತನಿಖೆಯನ್ನು ಯಾವ ರೀತಿ ಹಾಗೂ ಯಾವ ಏಜೆನ್ಸಿ ಮೂಲಕ ನಡೆಸಬೇಕು ಎಂಬುದರ ಕುರಿತು ವಾದ-ಪ್ರತಿವಾದಗಳನ್ನು ಆಲಿಸಿ ತನ್ನ ತೀರ್ಪನ್ನು ಕಾಯ್ದಿರಿಸಿದೆ.