

Supreme Court : ವಕ್ಫ್ ತಿದ್ದುಪಡಿ ಪ್ರಕರಣಕ್ಕೆ ಸಂಬಂಧಿಸಿ ವಕ್ಫ್ ಮಂಡಳಿಗಳ ನೇಮಕಾತಿಗೆ ತಡೆ ನೀಡಿ ಹಾಗೂ ಯಥಾಸ್ಥಿತಿ ಕಾಪಾಡುವಂತೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಹಲವು ಅರ್ಜಿಗಳ ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಕೇಂದ್ರ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರ ಸದಸ್ಯರನ್ನು ನೇಮಕ ಮಾಡುವ ಕಾಯ್ದೆಯ ನಿಯಮವನ್ನು ಪ್ರಶ್ನಿಸಿದೆ. ಅಲ್ಲದೆ “ಸರಕಾರವೇನಾದರೂ ಹಿಂದೂ ಧಾರ್ಮಿಕ ದತ್ತಿ ಮಂಡಳಿಗಳಲ್ಲಿ ಮುಸ್ಲಿಮರ ನೇಮಕಕ್ಕೆ ಅವಕಾಶ ನೀಡುತ್ತದೆಯೆ?” ಎಂದು ಕೇಂದ್ರ ಸರಕಾರವನ್ನು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿದೆ.
ಅಲ್ಲದೆ ವಕ್ಫ್ ಕಾಯ್ದೆಯ ಸೆಕ್ಷನ್ 9 ಮತ್ತು 14 ರ ಅಡಿಯಲ್ಲಿ ಕೇಂದ್ರ ವಕ್ಫ್ ಕೌನ್ಸಿಲ್ ಮತ್ತು ರಾಜ್ಯ ವಕ್ಫ್ ಮಂಡಳಿಗಳಿಗೆ ಯಾವುದೇ ನೇಮಕಾತಿಗಳನ್ನು ಸದ್ಯಕ್ಕೆ ಮಾಡುವಂತಿಲ್ಲ.













