

ಆರ್ಥಿಕವಾಗಿ ದುರ್ಬಲವಾದ ವರ್ಗಗಳಿಗೆ (EWS) ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಶೇ 10 ರಷ್ಟು ಮೀಸಲಾತಿಯನ್ನು ನೀಡುವ ಸಂವಿಧಾನದ 103 ನೇ ತಿದ್ದುಪಡಿಯ ಸಾಂವಿಧಾನಿಕ ಸಿಂಧುತ್ವದ ಕುರಿತು ಸುಪ್ರೀಂ ಕೋರ್ಟ್ ಇಂದು( ನವೆಂಬರ್ 7 ) ತನ್ನ ನಿರ್ಧಾರವನ್ನು ಪ್ರಕಟಿಸಿದೆ.
ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ 10% ಮೀಸಲಾತಿಯನ್ನು ( 10% reservation ) ಸುಪ್ರೀಂ ಕೋರ್ಟ್ ( Supreme Court ) ಸಾಂವಿಧಾನಿಕ ಪೀಠದ ನಾಲ್ವರು ನ್ಯಾಯಾಧೀಶರು ಎತ್ತಿಹಿಡಿದಿದ್ದಾರೆ.
ಈ ತಿದ್ದುಪಡಿಯು ಇಡಬ್ಲ್ಯೂಎಸ್ ನ ( EWS ) ಪ್ರತ್ಯೇಕ ವರ್ಗವನ್ನು ಸೃಷ್ಟಿಸುತ್ತದೆ. ಎಸ್‌ಇಬಿಸಿಗಳನ್ನು ಹೊರಗಿಡುವುದು ತಾರತಮ್ಯ ಅಥವಾ ಸಂವಿಧಾನದ ಉಲ್ಲಂಘನೆ ಎಂದು ಹೇಳಲು ಸಾಧ್ಯವಿಲ್ಲ’ ಎಂದು ನ್ಯಾಯಮೂರ್ತಿ ತ್ರಿವೇದಿ ಅಭಿಪ್ರಾಯಪಟ್ಟರು.
ಆರ್ಥಿಕ ಮಾನದಂಡಗಳ ಮೇಲಿನ ಮೀಸಲಾತಿಯು ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುವುದಿಲ್ಲ. ಇಡಬ್ಲ್ಯೂಎಸ್ ಮೀಸಲಾತಿಯು ಸಮಾನತೆಯ ಸಂಹಿತೆಯನ್ನು ಉಲ್ಲಂಘಿಸುವುದಿಲ್ಲ ಎಂದು ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ನ್ಯಾಯಾಲಯದಲ್ಲಿ ಹೇಳಿದರು.
ಇಡಬ್ಲ್ಯೂಎಸ್ ಮೀಸಲಾತಿಯು ಮೂಲಭೂತ ರಚನೆಯನ್ನು ಉಲ್ಲಂಘಿಸುವುದಿಲ್ಲ ಎಂದು ಕೇಂದ್ರವು ಈ ಹಿಂದೆ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿತ್ತು.













