ಮಂಗಳವಾರ, 27 ಅಕ್ಟೋಬರ್ 2026
Trending

Supreme Court: ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ಧು ಪ್ರಕರಣ- ವಿಚಾರಣೆ ನಡೆಸಿದ ಕೋರ್ಟ್ ಹೇಳಿದ್ದೇನು?

ಕೇಂದ್ರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ವಾದ ಮಂಡಿಸಿದ್ದು, ಜಮ್ಮು ಮತ್ತು ಕಾಶ್ಮೀರದ ಸಂವಿಧಾನವು ಭಾರತದ ಸಂವಿಧಾನಕ್ಕೆ ಅಧೀನವಾಗಿದೆ‌

Supreme Court: ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ಧು ಪ್ರಕರಣದ ಬಗ್ಗೆ ವಿಚಾರಣೆ ನಡೆದಿದ್ದು, ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್ ಹೇಳಿದ್ದೇನು ಗೊತ್ತಾ? ಜಮ್ಮು ಮತ್ತು ಕಾಶ್ಮೀರಕ್ಕೆ (Jammu and Kashmir) ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು (Article 370 Case) ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ಅಂತ್ಯವಾಗಿದೆ. 16 ದಿನಗಳ ಮ್ಯಾರಥಾನ್ ವಿಚಾರಣೆಯ ನಂತರ ಸುಪ್ರೀಂಕೋರ್ಟ್ (Supreme Court) ತನ್ನ ಆದೇಶವನ್ನು ಕಾಯ್ದಿರಿಸಿದೆ.

Sponsored

 

Advertisement
Advertisement

ಪೀಠವು ಆರ್ಟಿಕಲ್ 370 ಅನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ 2019 ರ ನಿರ್ಧಾರವನ್ನು ಪ್ರಶ್ನಿಸುವ ಒಂದು ಬ್ಯಾಚ್ ಅರ್ಜಿಗಳನ್ನು ಆಲಿಸಿತು. ಅರ್ಜಿದಾರರ ಪರವಾಗಿ ಹಿರಿಯ ವಕೀಲ ದುಶ್ಯಂತ್ ದವೆ ವಾದ ಮಂಡಿಸಿದ್ದು, 370 ನೇ ವಿಧಿಯನ್ನು ರದ್ದುಗೊಳಿಸಿರುವುದು ಅಧಿಕಾರದ ದುರುಪಯೋಗದ ಶ್ರೇಷ್ಠ ಉದಾಹರಣೆ ಎಂದು ವಾದಿಸಿದ್ದರು.

 

ಆರ್ಟಿಕಲ್ 370ರ ರದ್ದತಿಗೆ ಬೆಂಬಲವಾಗಿ ಮತ್ತು ಹಿಂದಿನ ರಾಜ್ಯವಾದ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ ನಿಬಂಧನೆಯನ್ನು ರದ್ದುಗೊಳಿಸುವಲ್ಲಿ ಯಾವುದೇ ʼಸಾಂವಿಧಾನಿಕ ವಂಚನೆ ಎಸಗಿಲ್ಲ ಎಂದು ಕೇಂದ್ರವು ಪ್ರತಿಪಾದಿಸಿತು.

 

ಕೇಂದ್ರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ವಾದ ಮಂಡಿಸಿದ್ದು, ಜಮ್ಮು ಮತ್ತು ಕಾಶ್ಮೀರದ ಸಂವಿಧಾನವು ಭಾರತದ ಸಂವಿಧಾನಕ್ಕೆ ಅಧೀನವಾಗಿದೆ‌. ಮುಂದಿನ ದಿನದಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ರಾಜ್ಯವಾಗಿ ಹಿಂತಿರುಗಿಸಿದರೆ, ಲಡಾಖ್ ಕೇಂದ್ರಾಡಳಿತ ಪ್ರದೇಶವಾಗಿ ಉಳಿಯುತ್ತದೆ ಎಂದು ಹೇಳಿದರು. ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಕ್ರಮವು ʼತಾತ್ಕಾಲಿಕ ಕ್ರಮʼ ಎಂದು ನ್ಯಾಯಾಲಯಕ್ಕೆ ಹೇಳಿದರು.

ಇದನ್ನೂ ಓದಿ : ಅರೆ ಏನಾಶ್ಚರ್ಯ.. ಇಂಜಿನ್ ಇಲ್ಲದೆ ಚಲಿಸಿದ ರೈಲು ನಿಬ್ಬೆರಾಗಿ ನಿಂತು ನೋಡಿದ ಜನ !! ವಿಡಿಯೋ ವೈರಲ್

Advertisement