ಬಾರ್ ಸಮೀಪ ತಲವಾರು ಪ್ರದರ್ಶನ: ಇಬ್ಬರು ಪೊಲೀಸ್ ವಶಕ್ಕೆ
ಉಪ್ಪಿನಂಗಡಿ: ಬಾರ್ ಸಮೀಪ ನಡೆದ ಮಾತಿನ ಚಕಮಕಿ ಗಲಾಟೆ ನಡೆದಿದ್ದು, ಈ ವೇಳೆ ತಲವಾರು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆರೋಪದಲ್ಲಿ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Sponsoredಅ.18 ರಂದು ರಾತ್ರಿ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಶೆಣೈ ರಸ್ತೆಯಲ್ಲಿರುವ ಬಾರ್ ಸಮೀಪ ಮಂಜುನಾಥ್, ವಿಶ್ವನಾಥ ಹಾಗೂ ಮತ್ತೋರ್ವ ವ್ಯಕ್ತಿಯ ನಡುವೆ ಮಾತಿನ ಚಕಮಕಿ ನಡೆದಿದ್ದು, ನಂತರ ಗಲಾಟೆ ನಡೆದಿದೆ.
ಈ ವೇಳೆ ಮಂಜುನಾಥ್ ಎನ್ನುವಾತ ತನ್ನ ಬಳಿಯಿದ್ದ ತಲವಾರನ್ನು ಸಾರ್ವಜನಿಕವಾಗಿ ಪ್ರದರ್ಶನ ಮಾಡಿ ಭೀತಿ ಉಂಟುಮಾಡಿದ್ದಾನೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ್ ಮತ್ತು ವಿಶ್ವನಾಥನನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.




