Home News Vijayapura : ನಾಯಿ ಉಳಿಸಲು ಹೋಗಿ ಬೈಕ್ ನಿಂದ ಬಿದ್ದು ಶಿಕ್ಷಕ ಸಾವು – ನೆಚ್ಚಿನ...

Vijayapura : ನಾಯಿ ಉಳಿಸಲು ಹೋಗಿ ಬೈಕ್ ನಿಂದ ಬಿದ್ದು ಶಿಕ್ಷಕ ಸಾವು – ನೆಚ್ಚಿನ ಗುರುಗಳನ್ನು ಕಳೆದುಕೊಂಡು ಬಿಕ್ಕಿ ಬಿಕ್ಕಿ ಅತ್ತ ವಿದ್ಯಾರ್ಥಿಗಳು

Hindu neighbor gifts plot of land

Hindu neighbour gifts land to Muslim journalist

Vijayapura : ಶಿಕ್ಷಕರೊಬ್ಬರು ಬೈಕ್ ನಲ್ಲಿ ಶಾಲೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ನಾಯಿ ಅಡ್ಡ ಬಂದ ಕಾರಣ ಅದನ್ನು ತಪ್ಪಿಸಲು ಹೋಗಿ ಬಿದ್ದು ಸಾವಿಗೀಡಾದ ದುರಂತ ಘಟನೆ ವಿಜಯಪುರದಲ್ಲಿ ನಡೆದಿದೆ. ನೆಚ್ಚಿನ ಶಿಕ್ಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳು ಬಿಕ್ಕಿಬಿಕ್ಕಿ ಅತ್ತಿದ್ದಾರೆ.

 

ಈ ದಾರುಣ ದಾರುಣ ಘಟನೆ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಅಂಬಳನೂರ ಕ್ರಾಸ್ ಬಳಿ ಗುರುವಾರ ನಡೆದಿದೆ. ವಾಸುದೇವ ಹಂಚಾಟೆ (46) ಮೃ*ತ ದುರ್ದೈವಿ ಶಿಕ್ಷಕ. ಕಣಕಾಲ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಎಂದಿನಂತೆ ಗುರುವಾರ ಶಾಲೆಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಮಾರ್ಗ ಮಧ್ಯೆ ನಾಯಿ ಅಡ್ಡ ಬಂದಿದ್ದು, ಅದನ್ನು ತಪ್ಪಿಸಲು ಹೋಗಿ ಸ್ಕಿಡ್ ಆಗಿ ಬಿದ್ದು ಸ್ಥಳದಲ್ಲೇ ಮೃ*ತಪಟ್ಟಿದ್ದಾರೆ.

 

ಅಂದಹಾಗೆ ವಾಸುದೇವ ಹಂಚಾಟೆ ಮಕ್ಕಳ ನೆಚ್ಚಿನ ಶಿಕ್ಷಕರಾಗಿದ್ದರು. ಶೈಕ್ಷಣಿಕ ಪಾಠದ ಜೊತೆ ಪಠ್ಯೇತರ ಚಟುವಟಿಕೆಯಲ್ಲೂ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳಲು ಪ್ರೇರಪಣೆ ನೀಡುತ್ತಿದ್ದರು. ಟ್ರಾಫಿಕ್ ನಿಯಮ ವಿಚಾರದಲ್ಲಿ ಮಕ್ಕಳಿಗೆ ಪ್ರತಿ ದಿನ ತಿಳಿ ಹೇಳುತ್ತಿದ ಶಿಕ್ಷಕ, ಹೆಲ್ಮೆಟ್ ಧರಿಸಲು ವಿದ್ಯಾರ್ಥಿಗಳಿಗೆ ಹೇಳುತ್ತಿದ್ದರು. ಪೋಷಕರನ್ನು ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಲಾಯಿಸುವಂತೆ ಸೂಚಿಸಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿ ಹೇಳುತ್ತಿದ್ದರು. ಆದರೆ, ಬೈಕ್ ಅಪಘಾ*ತದಲ್ಲಿ ಶಿಕ್ಷಕ ಮೃ*ತಪಟ್ಟ ವಿಷಯ ತಿಳಿದು ವಿದ್ಯಾರ್ಥಿಗಳು ನೋವಿನಿಂದ ಕಣ್ಣೀರಿಟ್ಟಿದ್ದಾರೆ.