ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ, ಸಮಾಜಕ್ಕೆ ಮಾದರಿಯಾಗುವ ಶಿಕ್ಷಕರೇ ಶಾಲೆಯ ತರಗತಿ ಕೊಠಡಿಯಲ್ಲಿ ಅಸಭ್ಯವಾಗಿ ವರ್ತಿಸಿರುವ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Sponsoredಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ಪ್ರಾಥಮಿಕ ಶಾಲೆಯೊಂದರಲ್ಲಿ ತರಗತಿ ವೇಳೆಯಲ್ಲೇ ಈ ಘಟನೆ ನಡೆದಿದೆ. ತರಗತಿಯ ಕೊಠಡಿಯಲ್ಲಿ ವಿದ್ಯಾರ್ಥಿಗಳು ಇಲ್ಲದ ಸಮಯವನ್ನು ಬಳಸಿಕೊಂಡು ಶಿಕ್ಷಕ ಮತ್ತು ಶಿಕ್ಷಕಿ ಅಸಭ್ಯವಾಗಿ ನಡೆದುಕೊಂಡಿದ್ದಾರೆ. ಈ ಇಬ್ಬರು ಶಿಕ್ಷಕರ ಲೀಲಾಲಾವಲ್ಯಗಳನ್ನು ಸ್ಥಳೀಯರೊಬ್ಬರು ರಹಸ್ಯವಾಗಿ ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದು ಜಾಲತಾಣಗಳಿಗೆ ಹರಿಬಿಟ್ಟಿದ್ದಾರೆನ್ನಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇಬ್ಬರೂ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.ವಿಡಿಯೋ ಗಮನಕ್ಕೆ ಬರುತ್ತಿದ್ದಂತೆಯೇ ಕನೌಜ್ ಜಿಲ್ಲಾ ಮೂಲ ಶಿಕ್ಷಣಾಧಿಕಾರಿಗಳು ಘಟನೆಯ ತನಿಖೆಗೆ ಆದೇಶಿಸಿದ್ದಾರೆ. ಶಾಲೆಯ ಶಿಸ್ತು ಹಾಗೂ ಶಿಕ್ಷಕ ವೃತ್ತಿಯ ಘನತೆಗೆ ಧಕ್ಕೆ ತಂದಿರುವ ಆರೋಪದ ಮೇಲೆ ಇಬ್ಬರ ವಿರುದ್ಧ ಅಮಾನತು ಸೇರಿದಂತೆ ಕಠಿಣ ಇಲಾಖಾ ಕ್ರಮ ಜರುಗಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.




