ಭಾನುವಾರ, 25 ಅಕ್ಟೋಬರ್ 2026

ಪಿಯು ಉಪನ್ಯಾಸಕರಿಗೆ ಶಾಕಿಂಗ್‌ ನ್ಯೂಸ್‌ ನೀಡಿದ ಸರಕಾರ

DElEd Course

ರಾಜ್ಯದ ಸರಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ರಾಜ್ಯ ಸರಕಾರ ಶಾಕಿಂಗ್‌ ನ್ಯೂಸ್‌ವೊಂದನ್ನು ನೀಡಿದೆ. ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ಸಲುವಾಗಿ, ಪಿಯು ಉಪನ್ಯಾಸಕರು ಇನ್ಮುಂದೆ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೂ ಬೋಧನೆ ಮಾಡಬೇಕೆನ್ನುವ ಮಹತ್ವದ ನಿಯಮವನ್ನು ಜಾರಿಗೆ ತರಲು ಸರಕಾರ ಮುಂದಾಗಿದೆ.

Sponsored

ಸರಕಾರವು ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಮಹತ್ವದ ತಿದ್ದುಪಡಿಯನ್ನು ತಂದಿದೆ.

Marriage AdMarriage AdSponsored

ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ‘ಪದವಿ ಪೂರ್ವ ಶಿಕ್ಷಣ ನೇಮಕಾತಿ ನಿಯಮಗಳು-2013’ ಕ್ಕೆ ಕರಡು ತಿದ್ದುಪಡಿಯನ್ನು ತಂದಿದೆ. ಇದರ ಅನ್ವಯ, ಪಿಯು ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪನ್ಯಾಸಕರು ತಮ್ಮ ನಿಯೋಜಿತ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳ ಜೊತೆಗೆ, ಪ್ರೌಢಶಾಲಾ ಹಂತದ 9 ಮತ್ತು 10ನೇ ತರಗತಿಗಳಿಗೂ ಪಾಠ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ.

ಸರಕಾರದ ಈ ನಿಯಮಕ್ಕೆ ಕುರಿತಂತೆ ಕರಡು ಅಧಿಸೂಚನೆಯನ್ನು ಹೊರಡಿಸಿದ್ದು, ಉಪನ್ಯಾಸಕರು, ಸಂಘಟನೆಗಳು ಹಾಗೂ ಸಾರ್ವಜನಿಕರು ತಮ್ಮ ಆಕ್ಷೇಪಣೆ ಅಥವಾ ಸಲಹೆಗಳನ್ನು ಸಲ್ಲಿಸಲು 7 ದಿನಗಳ ಅಲ್ಪ ಕಾಲಾವಕಾಶವನ್ನು ನೀಡಿದೆ. ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಸರಕಾರ ಅಂತಿಮ ಆದೇಶ ಹೊರಡಿಸಲಿದೆ.