Home News ಅತಿಯಾದ ಕೆಲಸದ ಒತ್ತಡ-ಟೆಕ್ಕಿ ಆತ್ಮಹತ್ಯೆ

ಅತಿಯಾದ ಕೆಲಸದ ಒತ್ತಡ-ಟೆಕ್ಕಿ ಆತ್ಮಹತ್ಯೆ

Hindu neighbor gifts plot of land

Hindu neighbour gifts land to Muslim journalist

Bengaluru : ಅತಿಯಾದ ಕೆಲಸದ ಒತ್ತಡ ಹಾಗೂ ಮ್ಯಾನೇಜರ್ ನೀಡುತ್ತಿದ್ದ ಕಿರುಕುಳದಿಂದಾಗಿ ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಯುವಕ ನಿಖಿಲ್ ಸೋಮವಂಶಿ (25) ಆತ್ಮಹತ್ಯೆಗೆ ಶರಣಾಗಿದ್ದಾರೆ. ಈತನ ಮೃತದೇಹ ಮೇ 8ರಂದು ಅಗರ ಕೆರೆಯಲ್ಲಿ ಪತ್ತೆಯಾಗಿದೆ ಎಂದು ವರಡಿಯಾಗಿದ್ದು, ಇವರ ಆತ್ಮಹತ್ಯೆಗೆ ಕೆಲಸದ ಒತ್ತಡವೇ ಕಾರಣ ಎಂದು ಹೇಳಲಾಗದು ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾರಾಷ್ಟ್ರ ಮೂಲದ ನಿಖಿಲ್ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ವಾಸಿಸುತ್ತಿದ್ದು, ಐಐಎಸ್ಸಿ ಪದವೀಧರರಾದ ಸೋಮವಂಶಿ ಕೋರಮಂಗಲದ ಎಐ ಸಂಸ್ಥೆಯಲ್ಲಿ ಮೆಷಿನ್ ಲರ್ನಿಂಗ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.

ನಿಖಿಲ್ ಆತ್ಮಹತ್ಯೆ ಮಾಡಿಕೊಂಡ ಕೆಲವು ದಿನಗಳ ನಂತರ, ಅವರ ಸಹೋದ್ಯೋಗಿಗಳು ಸಾಮಾಜಿಕ ಮಾಧ್ಯಮದಲ್ಲಿ ಕೆಲಸದ ಒತ್ತಡವೇ ಅವರು ಈ ಕಠಿಣ ಕ್ರಮ ಕೈಗೊಳ್ಳಲು ಕಾರಣ ಎಂದು ಪೋಸ್ಟ್ ಮಾಡಿದ್ದು, ಕೆಲವರು ನಿಖಿಲ್ ಅವರ ಮ್ಯಾನೇಜರ್ ಅವರ ಆತ್ಮಹತ್ಯೆಗೆ ಕಾರಣ ಎಂದು ಆರೋಪಿಸಿದ್ದಾರೆ. ಆದರೆ, ಸಾಫ್ಟ್‌ವೇರ್ ಎಂಜಿನಿಯರ್ ಆತ್ಮಹತ್ಯೆಗೆ ಕೆಲಸಕ್ಕೆ ಸಂಬಂಧಿಸಿದ ಒತ್ತಡ ಕಾರಣ ಎಂದು ಹೇಳಲು ಯಾವುದೇ ಪುರಾವೆಗಳಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.