Home News Drone Prathap : ಡ್ರೋನ್ ಪ್ರತಾಪ್ ಗೆ ಹತ್ತು ವರ್ಷ ಜೈಲು ಶಿಕ್ಷೆ?!

Drone Prathap : ಡ್ರೋನ್ ಪ್ರತಾಪ್ ಗೆ ಹತ್ತು ವರ್ಷ ಜೈಲು ಶಿಕ್ಷೆ?!

Hindu neighbor gifts plot of land

Hindu neighbour gifts land to Muslim journalist

Drone Prathap: ಸೋಡಿಯಂ ಮೆಟಲ್ ಬಳಸಿ ಕೃಷಿ ಹೊಂಡದಲ್ಲಿ ನಡೆಸಿದ್ದ ಸ್ಫೋಟ ಪ್ರಕರಣದ ಆರೋಪದಡಿ ಇದೀಗ ಬಿಗ್​ಬಾಸ್​ ಖ್ಯಾತಿಯ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಅವರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಅಲ್ಲದೆ ವಿಚಾರಣೆ ವೇಳೆ ಡ್ರೋನ್ ಪ್ರತಾಪ್ ಅವರು ಸ್ಪೋಟದ ಬಗ್ಗೆ ಅನೇಕ ಅಚ್ಚರಿ ಸತ್ಯಗಳನ್ನು ಹೊರಹಾಕಿದ್ದರು. ಈ ಬೆನ್ನಲ್ಲೇ ಡ್ರೋನ್ ಪ್ರತಾಪ್ ಅವರಿಗೆ ಹತ್ತು ವರ್ಷ ಜೈಲು ಶಿಕ್ಷೆಯಾಗುತ್ತದೆ ಎಂಬ ಸುದ್ದಿ ಒಂದು ಸದ್ದು ಮಾಡುತ್ತಿದೆ.

ಹೌದು, ಸೈನ್ಸ್ ವಿಡಿಯೋ ಹೆಸರಿನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ವಿಡಿಯೋವೊಂದನ್ನ ರಿಲೀಸ್‌ ಮಾಡಿದ್ದು, ಈ ಮೂಲಕ ಮತ್ತೆ ಎಡವಟ್ಟು ಮಾಡಿಕೊಂಡಿದ್ದರು. ಅದ್ರಲ್ಲಿ ನಿರ್ಜನ ಪ್ರದರ್ಶನದ ಕೃಷಿ ಹೊಂಡವೊಂದರಲ್ಲಿ ಪ್ರತಾಪ್ ಸೋಡಿಯಂ ಮೆಟಲ್ ಬಳಸಿಕೊಂಡು, ಅದು ನೀರಿಗೆ ಬೆರೆತಾಗ ಹೇಗೆ ಸ್ಫೋಟವಾಗುತ್ತೆ ನೋಡಿ ಎಂಬ ಎಕ್ಸಪೆರಿಮೆಂಟ್​ ಮಾಡಿದ್ದನ್ನು ಕಾಣಬಹುದು. ಅಲ್ಲದೆ ನೀರಿಗೆ ಸೋಡಿಯಂ ಮೆಟಲ್ ಹಾಕುತ್ತಿದ್ದಂತೆ ಅದು ತಕ್ಷಣ ದೊಡ್ಡ ಮಟ್ಟದಲ್ಲಿ ಸ್ಫೋಟವಾಗಿದ್ದಲ್ಲದೇ, ಶಬ್ಧ ಕೂಡ ದೊಡ್ಡ ಪ್ರಮಾಣದಲ್ಲೇ ಕೇಳಿಸಿತ್ತು. ಇದು ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಿಂದ ಟೀಕೆಗೆ ಒಳಗಾಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಾಪ್ ಹುಚ್ಚಾಟಕ್ಕೆ ಕಿಡಿ ಕಾರಿದ್ದರು. ಅಷ್ಟೇ ಅಲ್ಲದೆ ಘಟನೆ ಸಂಬಂಧ ಮಿಡಿಗೇಶಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಮಿಡಿಗೇಶಿ ಪೊಲೀಸರು ಡ್ರೋನ್​ ಪ್ರತಾಪ್ ರನ್ನು ಬಂಧಿಸಿದ್ದಾರೆ. ಪ್ರತಾಪ್ ಸೈನ್ಸ್​ ಹೆಸರಲ್ಲಿ ಇದೆಂಥಾ ಹುಚ್ಚಾಟ ಮಾಡುತ್ತಿದ್ದಾನೆ ಎಂತಲೂ ಕೆಲ ನೆಟ್ಟಿಗರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಇನ್ನು ವಿಚಾರಣೆ ವೇಳೆ ಡ್ರೋನ್​ ಪ್ರತಾಪ್​ ಹಲವು ಸಂಗತಿಯಗಳನ್ನು ಬಾಯಿಬಿಟ್ಟಿದ್ದಾರೆ. ​ಇದಕ್ಕೂ ‌ಮುನ್ನ ಎರಡು ಬಾರಿ ಇದೇ ರೀತಿಯ ಸ್ಫೋಟಿಸಿದ್ದೆ. ಸ್ಫೋಟದ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದು ಯೂಟ್ಯೂಬ್​​ನಲ್ಲಿ ಅಪ್ಲೋಡ್​ ಮಾಡಿದ್ದೆ ಎಂದು ಡ್ರೋನ್​ ಪ್ರತಾಪ್ ಪೊಲೀಸರ ಮುಂದೆ ಹೇಳಿದ್ದಾರೆ. ಯೂಟ್ಯೂಬ್​​ನಿಂದ 100 ಡಾಲರ್ ಬಂದಿತ್ತು. ಹೀಗಾಗಿ, ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಸೋಡಿಯಂ ಬಳಸಿ ಸ್ಫೋಟಿಸಿದೆ. ಸ್ಫೋಟದ ವಿಡಿಯೋವನ್ನು ಯೂಟ್ಯೂಬ್​ನಲ್ಲಿ ಅಪ್ಲೋಡ್​​ ಮಾಡಿದೆ. ಇದರಿಂದ ಬರುವ ಹಣವನ್ನು ಸಮಾಜ ಕಾರ್ಯಕ್ಕೆ ಉಪಯೋಗಿಸಲು ನಿರ್ಧರಿಸಿದ್ದೇನೆ ಎಂದು ಬಾಯಿ ಬಿಟ್ಟಿದ್ದಾರೆ. ಅಲ್ಲದೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಸ್ಫೋಟವಾಗುತ್ತದೆ ಎಂದು ನನಗೆ ಅರಿವಿರಲಿಲ್ಲ. ಸ್ಫೋಟವಾದ ಬಳಿಕ ನನಗೆ ಅರಿವು ಆಗಿದೆ ಎಂದು ಪೊಲೀಸರ ಮುಂದೆ ಹೇಳಿದ್ದಾರೆ. ಒಂದು ವೇಳೆ ಈ ಪ್ರಕರಣದಲ್ಲಿ ಅವರ ಮೇಲಿನ ಆರೋಪ ಸಾಬೀತಾದರೆ 10 ವರ್ಷದವರೆಗೆ ಜೈಲು ಶಿಕ್ಷೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.