ಸೋಮವಾರ, 26 ಅಕ್ಟೋಬರ್ 2026
Trending

ನೆಲ್ಯಾಡಿ ಬಳಿ ಭೀಕರ ಅಪಘಾತ: ಪುತ್ತೂರಿನ ಕಾಲೇಜು ವಿದ್ಯಾರ್ಥಿ ಸಾವು

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ ಕರ್ಬಸಂಕದ ಬಳಿ ಗುರುವಾರ ಮುಂಜಾನೆ ಕಾರು-ಗ್ಯಾಸ್‌ ಟ್ಯಾಂಕರ್‌ ಡಿಕ್ಕಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಪ್ರಥಮ ಪಿಯುಸಿ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ.

Sponsored

ಮೃತರನ್ನು ನೆಲ್ಯಾಡಿಯಲ್ಲಿ ಫ್ಲವರ್ಸ್‌ ಹೋಟೆಲ್‌ ನಡೆಸುತ್ತಿರುವ ಜೋಜೋ ಟಿ.ಜೋರ್ಜ್‌ ಅವರ ಪುತ್ರ ಅಶ್ವಿನ್‌ ಜೋಜೋ ಜೋರ್ಜ್‌ (16) ಎಂದು ಗುರುತಿಸಲಾಗಿದೆ.

ಗುರುವಾರ ಮುಂಜಾನೆ ನೆಲ್ಯಾಡಿ ಕರ್ಬಸಂಕದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್‌ ಟ್ಯಾಂಕರ್‌ಗೆ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಅಶ್ವಿನ್‌ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ನೆಲ್ಯಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಅಪಘಾತಕ್ಕೆ ನಿಖರ ಕಾರಣ ತನಿಖೆಯಿಂದ ತಿಳಿದು ಬರಬೇಕಿದೆ.