Home News Indira Kit: ಅನ್ನಭಾಗ್ಯದ ಅಕ್ಕಿ ಬದಲಿಗೆ ‘ಇಂದಿರಾ ಕಿಟ್’ ವಿತರಿಸಲು ಸರ್ಕಾರ ನಿರ್ಧಾರ !! ಏನೆಲ್ಲಾ...

Indira Kit: ಅನ್ನಭಾಗ್ಯದ ಅಕ್ಕಿ ಬದಲಿಗೆ ‘ಇಂದಿರಾ ಕಿಟ್’ ವಿತರಿಸಲು ಸರ್ಕಾರ ನಿರ್ಧಾರ !! ಏನೆಲ್ಲಾ ಇರಲಿದೆ ಅದರಲ್ಲಿ

Hindu neighbor gifts plot of land

Hindu neighbour gifts land to Muslim journalist

Indira Kit: ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಅನ್ನಭಾಗ್ಯ ಯೋಜನೆಯಡಿ ನೀಡುತ್ತಿದ್ದ 5 ಕೆ.ಜಿ ಹೆಚ್ಚುವರಿ ಅಕ್ಕಿಯನ್ನು ಇನ್ನು ಮುಂದೆ ನೀಡದಿರಲು ಸರ್ಕಾರ ನಿರ್ಧರಿಸಿದೆ. ಇದರ ಬದಲಿಗೆ ಇಂದಿರಾ ಕಿಟ್ ಅನ್ನು ವಿತರಿಸಲು ಸರ್ಕಾರ ಮುಂದಾಗಿದೆ.

ಹೌದು, ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಎಎವೈ ಮತ್ತು ಪಿಹೆಚ್‌ಹೆಚ್ ಪಡಿತರಕ್ಕೆ ಪರ್ಯಾಯವಾಗಿ ಫಲಾನುಭವಿಗಳಿಗೆ ಇಂದಿರಾ ಆಹಾರ ಕಿಟ್‌ಗಳನ್ನು (ಪೌಷ್ಠಿಕ ಆಹಾರದ ಕಿಟ್) ವಿತರಿಸಲು ತೀರ್ಮಾನಿಸಲಾಗಿದೆ. ಹೆಚ್ಚುವರಿಯಾಗಿ ನೀಡಲಾಗುವ 5 ಕೆ.ಜಿ ಅಕ್ಕಿಯ ಬದಲಾಗಿ ಪ್ರತಿ ಪಡಿತರ ಚೀಟಿಗೆ ಇಂದಿರಾ ಆಹಾರ ಕಿಟ್ ನೀಡಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ:Indian Railway: ಬೆಂಗಳೂರು–ಚೆನ್ನೈ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ

5 ಕೆ.ಜಿ ಹೆಚ್ಚುವರಿ ಅಕ್ಕಿ ನೀಡಲು ಆಯವ್ಯಯದಲ್ಲಿ ಹಂಚಿಕೆ ಮಾಡಿರುವ 6,426 ಕೋಟಿ ರೂ. ಅನುದಾನದಲ್ಲಿ 6119.52 ಕೋಟಿ ರೂ. ವೆಚ್ಚದಲ್ಲಿ ಇಂದಿರಾ ಆಹಾರ ಕಿಟ್ (ಪೌಷ್ಠಿಕ ಆಹಾರ ಕಿಟ್) ಒದಗಿಸಲು ಬಜೆಟ್ ಮರುಹಂಚಿಕೆ ಮಾಡಲು ಅನುಮೋದನೆ ನೀಡಲಾಗಿದೆ. ಇಂದಿರಾ ಕಿಟ್​​ನಲ್ಲಿ 1 ಕೆ.ಜಿ ತೊಗರಿ ಬೇಳೆ, 1 ಲೀಟರ್​ ಅಡುಗೆ ಎಣ್ಣೆ, 1 ಕೆ.ಜಿ ಸಕ್ಕರೆ ಹಾಗೂ 1 ಕೆ.ಜಿ ಉಪ್ಪು ಇರಲಿದೆ.