Home News Online Betting: ಆನ್‌ಲೈನ್ ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಲು ಹೊಸ ಮಸೂದೆ ರೂಪಿಸಿದ ಸರ್ಕಾರ!

Online Betting: ಆನ್‌ಲೈನ್ ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಲು ಹೊಸ ಮಸೂದೆ ರೂಪಿಸಿದ ಸರ್ಕಾರ!

Hindu neighbor gifts plot of land

Hindu neighbour gifts land to Muslim journalist

Online Betting: ಆನ್‌ಲೈನ್ ಬೆಟ್ಟಿಂಗ್ (Online Betting) ಹಾಗೂ ಗ್ಯಾಂಬ್ಲಿಂಗ್‌ಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದ್ದು, ಹೊಸ ಮಸೂದೆ ರೂಪಿಸಿದೆ. ಕರ್ನಾಟಕ ಪೊಲೀಸ್‌ (ತಿದ್ದುಪಡಿ) ಮಸೂದೆ 2025 ಕರಡು ಸಿದ್ದಪಡಿಸಿರುವ ರಾಜ್ಯ ಸರ್ಕಾರ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಲು ಮುಂದಾಗಿದೆ.

ಹೊಸ ಮಸೂದೆ ಪ್ರಕಾರ ರಾಜ್ಯ ಸರ್ಕಾರ ಕರ್ನಾಟಕ ಆನ್‌ಲೈನ್ ಬೆಟ್ಟಿಂಗ್ ಮತ್ತು ಗೇಮಿಂಗ್ ಪ್ರಾಧಿಕಾರ ರಚನೆ ಮಾಡಲು ತೀರ್ಮಾನಿಸಿದೆ. ಈ ಪ್ರಾಧಿಕಾರ ಹೊಸ ಕಾನೂನಿನಂತೆ ನಿಯಮಗಳ ಜಾರಿ, ಅನುಪಾಲನೆ, ಆನ್‌ಲೈನ್ ಗೇಮಿಂಗ್ ಹಾಗೂ ಗ್ಯಾಂಬ್ಲಿಂಗ್ ಮೇಲೆ ನಿಯಂತ್ರಣ ಹಾಗೂ ನಿಗಾ ಇಡಲಿದೆ. ಪ್ರಾಧಿಕಾರ ದೃಢೀಕರಿಸಿದ ಕೇವಲ ಕೌಶಲ್ಯ ಆಟಗಳಿಗೆ ಮಾತ್ರ ಅನುಮತಿ ನೀಡಲಾಗುತ್ತದೆ.

ಈ ಪ್ರಸ್ತಾವಿತ ಕಾನೂನು ಪ್ರಕಾರ ಅದೃಷ್ಟದ ಆಟ (ಲಕ್ ಗೇಮ್) ಅಂದರೆ ಯಾವುದೇ ಆಟ, ಸ್ಪರ್ಧೆ ಅಥವಾ ಕ್ರಿಯೆಯ ಫಲಿತಾಂಶಗಳು ಅದೃಷ್ಟದಿಂದ ಅವಲಂಬಿತವಾಗಿರುವ ಆನ್‌ಲೈನ್‌ ಗ್ಯಾಂಬ್ಲಿಂಗ್, ಬೆಟ್ಟಿಂಗ್ ಚಟುವಟಿಕೆಗಳಿಗೆ ನಿಷೇಧವಿದೆ ಶಿಕ್ಷ ದಂಡ ಹೊಸ ಕಾಯ್ದೆಯಡಿ ಬೆಟ್ಟಿಂಗ್‌ ನಡೆಸುವವರಿಗೆ ಮೂರು ವರ್ಷ ಜೈಲುಶಿಕ್ಷೆ ಜೊತೆಗೆ 1 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಬೆಟ್ಟಿಂಗ್ ಪ್ರೋತ್ಸಾಹಿಸುವವರಿಗೆ 6 ತಿಂಗಳ ಕಾಲ ಜೈಲುಶಿಕ್ಷೆ ಜೊತೆಗೆ 10 ಸಾವಿರ ರೂ. ವಿಧಿಸಲಾಗುತ್ತದೆ.

ಇದನ್ನೂ ಓದಿ: Health Tips: ಈ ಅಭ್ಯಾಸಗಳು ಚಿಕ್ಕ ವಯಸ್ಸಲ್ಲೇ ವೃದ್ಧಾಪ್ಯ ತರಬಹುದು! ದೇಹವು ರೋಗಗಳ ನೆಲೆಯಾಗಬಹುದು! ಎಚ್ಚರ