

BJP: ಈಗಷ್ಟೇ ಮುಗಿದ ಮಹಾರಾಷ್ಟ್ರ(Maharashtra )ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಯು ಭರ್ಜರಿ ಗೆಲುವು ಸಾಧಿಸಿದೆ. ನೂತನ ಸರ್ಕಾರದ ಸಿಎಂ ಆಗಿ ದೇವೇಂದ್ರ ಫಡ್ನವೀಸ್(Devendra Fadnavis )ಅವರು ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ. ಅಂದರೆ ದೇವೇಂದ್ರ ಫಡ್ನವೀಸ್ ಅವರು ಮೊದಲ 2.5 ವರ್ಷಗಳ ಕಾಲ ಮಹಾರಾಷ್ಟ್ರ ಸಿಎಂ ಆಗಿ ಸೇವೆ ಸಲ್ಲಿಸುತ್ತಾರೆ, ನಂತರ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕಾಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹೌದು, ಬಿಜೆಪಿ(BJP) ನಾಯಕ ದೇವೇಂದ್ರ ಫಡ್ನವೀಸ್ ಮೂರನೇ ಬಾರಿಗೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಲಿದ್ದಾರೆ. ಫಡ್ನವಿಸ್ ಮೊದಲ ಎರಡೂವರೆ ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ, ನಂತರ ಏಕನಾಥ್ ಶಿಂಧೆ ಅವರು ಉಳಿದ ಅವಧಿಗೆ ಸಿಎಂ ಜವಾಬ್ದಾರಿ ವಹಿಸಲಿದ್ದಾರೆ.

ಫಡ್ನವೀಸ್ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ಅವರನ್ನು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸುವ ನಿರೀಕ್ಷೆಯಿದೆ. ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಪಿಎಂ ಮೋದಿ ಮತ್ತು ಬಿಜೆಪಿಯ ಕೇಂದ್ರ ನಾಯಕತ್ವದ ನಡುವಿನ ಚರ್ಚೆಯ ನಂತರ ಈ ವ್ಯವಸ್ಥೆಗೆ ಒಪ್ಪಿಗೆ ನೀಡಲಾಗಿದೆ ಎಂದು ಹೇಳಲಾಗಿದೆ.













