Home News BY Vijayendra: ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್‌ ಮಾಡಿದರೆ ಮುಂದೆ ಆಗುವ ಅನಾಹುತಕ್ಕೆ ರಾಜ್ಯಸರಕಾರವೇ ಹೊಣೆ: ವಿಜಯೇಂದ್ರ...

BY Vijayendra: ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್‌ ಮಾಡಿದರೆ ಮುಂದೆ ಆಗುವ ಅನಾಹುತಕ್ಕೆ ರಾಜ್ಯಸರಕಾರವೇ ಹೊಣೆ: ವಿಜಯೇಂದ್ರ ಕಿಡಿ

B Y Vijayendra

Hindu neighbor gifts plot of land

Hindu neighbour gifts land to Muslim journalist

BY Vijayendra: ಕರಾವಳಿಯಲ್ಲಿ ನಡೆಯುತ್ತಿರುವ ಹಿಂದೂ ಕಾರ್ಯಕರ್ತರ ಟಾರ್ಗೆಟ್‌ ವಿಷಯಕ್ಕೆ ಸಂಬಂಧಪಟ್ಟಂತೆ ಇದರಿಂದ ಮುಂದೆ ಆಗುವ ಎಲ್ಲಾ ಅನಾಹುತಗಳಿಗೆ ರಾಜ್ಯ ಸರಕಾರವೇ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕೊಪ್ಪಳದ ಕುಷ್ಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ರಾಜ್ಯ ಸರಕಾರ ಪೊಲೀಸರ ಮೇಲೆ ಒತ್ತಡ ಹಾಕಿ, ಅಮಾಯಕ ಹಿಂದೂ ಕಾರ್ಯಕರ್ತರನ್ನು ಬಂಧನ ಮಾಡುತ್ತಿದೆ. ಮಧ್ಯರಾತ್ರಿ ಬಿಜೆಪಿ (BJP) ಕಾರ್ಯಕರ್ತರು ಹಾಗೂ ಸಂಘ ಪರಿವಾರದ ಮುಖಂಡರ ಮನೆ-ಮನೆಗೆ ಹೋಗಿ ಬಾಗಿಲು ತಟ್ಟುತ್ತಿದ್ದಾರೆ. ಕೆಲವರನ್ನು ಓಲೈಕೆ ಮಾಡಲು ರಾಜ್ಯ ಸರ್ಕಾರ ಹೀಗೆ ಮಾಡುತ್ತಿದೆ. ತಪ್ಪಿತಸ್ಥರನ್ನು ಬಂಧಿಸಲು ನಮ್ಮ ಅಭ್ಯಂತರ ಇಲ್ಲ. ಆದರೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುವುದು ಸರಿಯಲ್ಲ. ಟಾರ್ಗೆಟ್ ಮಾಡಿದರೆ ಅದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಕಿಡಿಕಾರಿದರು.