Home News ಬೂದಿ ಮುಚ್ಚಿದ ಕೆಂಡದಂತಾಗಿದೆ ರಾಜ್ಯದ ಪರಿಸ್ಥಿತಿ | ಸ್ವಾತಂತ್ರ್ಯ ಹೋರಾಟಗಾರರ ವಿಚಾರವಾಗಿ ಮತ್ತೊಂದು ವಿವಾದವನ್ನು ಮೈಮೇಲೆ...

ಬೂದಿ ಮುಚ್ಚಿದ ಕೆಂಡದಂತಾಗಿದೆ ರಾಜ್ಯದ ಪರಿಸ್ಥಿತಿ | ಸ್ವಾತಂತ್ರ್ಯ ಹೋರಾಟಗಾರರ ವಿಚಾರವಾಗಿ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡ ರಾಜ್ಯ ಸರ್ಕಾರ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ನಿನ್ನೆಯಷ್ಟೇ ಅದ್ದೂರಿಯಾಗಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ದೇಶದೆಲ್ಲೆಡೆ ಅದ್ದೂರಿಯಾಗಿ ನಡೆಯುತ್ತಿದ್ದ ಸಂದರ್ಭದಲ್ಲಿ ಕನಾ೯ಟಕ ರಾಜ್ಯದಲ್ಲಿ ಟಿಪ್ಪು ಸುಲ್ತಾನ್ ಮತ್ತು ಸಾವಕ೯ರ್ ಫೋಟೋ ನಡುವೆ ನಡೆದ ಸಕ೯ಸ್ ರಾಜ್ಯದಾದ್ಯಂತ ಹಲವು ವಿವಾದಗಳಿಗೆ ದಾರಿ ಮಾಡಿದೆ.

ಇದೀಗ ರಾಜ್ಯ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ. ರಾಜಧಾನಿಯ ಮಾಣಿಕ್ ಷಾ ಪರೇಡ್ ಮೈದಾನದಲ್ಲಿರುವ ಎರಡು ದ್ವಾರಗಳ ಮೇಲಿದ್ದ ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನು ತೆಗೆಯಲಾಗಿದೆ.

ಎಂಜಿ ರೋಡ್ ಮೆಟ್ರೋ ನಿಲ್ದಾಣದ ಹಿಂಭಾಗ ಇರುವ ಮಾಣಿಕ್ ಷಾ ಮೈದಾನ ಎರಡು ದ್ವಾರಗಳ ಪೈಕಿ ಒಂದಕ್ಕೆ ರಾಣಿ ಚೆನ್ನಮ್ಮ, ಮತ್ತೊಂದಕ್ಕೆ ಟಿಪ್ಪು ಸುಲ್ತಾನ್ ದ್ವಾರ ಎಂದು ಹೆಸರಿಡಲಾಗಿತ್ತು. ಆದರೆ ಈ ಬಾರಿಯ ಕಾರ್ಯಕ್ರಮದ ಸಿದ್ಧತೆ ವೇಳೆ ಮೈದಾನಕ್ಕೆ ಬಣ್ಣ ಬಳಿಯುವಾಗ ಈ ಎರಡು ಹೆಸರಿಗೂ ಬಣ್ಣ ಬಳಿಯಲಾಗಿದೆ. ಪ್ರತೀ ವರ್ಷ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಈ ದ್ವಾರಗಳಿಗೆ ಬಣ್ಣ ಬಳಿಯುವುದರ ಜೊತೆಗೆ ಈ ಹೆಸರುಗಳನ್ನು ಸಿಂಗರಿಸಲಾಗುತ್ತಿತ್ತು. ಆದರೆ, ಈ ಬಾರಿ ಹೆಸರುಗಳನ್ನೇ ಬಣ್ಣ ತುಂಬಿ ಮುಚ್ಚಲಾಗಿದೆ.

ಈ ವಿಚಾರವಾಗಿ ಹಲವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ರಾಜ್ಯದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.