

Your message has been sent
Supreme Court: ಮಹಿಳೆಯರ ಸ್ತನಗಳನ್ನು ಹಿಡಿಯುವುದು ಅಥವಾ ಅವರು ಧರಿಸಿದ ಪ್ಯಾಂಟ್, ಪೈಜಾಮವನ್ನು ಎಳೆಯುವುದು, ಅವುಗಳ ದಾರವನ್ನು ಹಿಡಿಯುವುದು ಅತ್ಯಾಚಾರ ಅಥವಾ ಅತ್ಯಾಚಾರಕ್ಕೆ ಯತ್ನ ಆಗುವುದಿಲ್ಲ ಎಂದು ಅಲಹಾಬಾದ್ ಕೋರ್ಟ್ ಮಹತ್ವದ ತೀರ್ಪು ನೀಡಿತ್ತು. ಹೈಕೋರ್ಟಿನ ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಅರ್ಜಿ ಹಾಕಲಾಗಿತ್ತು. ಇದೀಗ ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಹೌದು, ಅತ್ಯಾಚಾರ ಯತ್ನಕ್ಕೆ ಸಂಬಂಧಿಸಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಕೋರ್ಟ್ ಈ ಮಹತ್ವದ ತೀರ್ಪು ನೀಡಿದ್ದು, ಸಂತ್ರಸ್ತೆಯ ಸ್ತನಗಳನ್ನು ಹಿಡಿಯುವುದು, ಆಕೆಯ ಪೈಜಾಮ ದಾರ ಅಥವಾ ಪ್ಯಾಂಟ್ ಎಳೆಯುವುದು ತೀವ್ರವಾದ ಲೈಂಗಿಕ ದೌರ್ಜನ್ಯ ಆಗುತ್ತದೆಯೇ ಹೊರತು ಅತ್ಯಾಚಾರ ಅಥವಾ ಅತ್ಯಾಚಾರ ಯತ್ನ ಆಗುವುದಿಲ್ಲ ಎಂದು ಕೋರ್ಟ್ ಹೇಳಿತ್ತು. ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯ ಪಟಿಯಾಲಿ ಪೊಲೀಸ್ ಠಾಣೆ ಪ್ರದೇಶಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ನ್ಯಾಯಮೂರ್ತಿ ರಾಮ್ ಮನೋಹರ್ ನಾರಾಯಣ್ ಮಿಶ್ರಾ ಅವರ ಪೀಠವು ಈ ತೀರ್ಪು ನೀಡಿತ್ತು.
ಮಾರ್ಚ್ 17 ರ ತೀರ್ಪಿನ ವಿವಾದಾತ್ಮಕ ಭಾಗವನ್ನು ತೆಗೆದುಹಾಕಲು ಆದೇಶ ಹೊರಡಿಸುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸುಪ್ರೀಂ ಕೋರ್ಟ್ ಅನ್ನು ಒತ್ತಾಯಿಸಿದೆ. ಇದಲ್ಲದೆ, ಭವಿಷ್ಯದಲ್ಲಿ ನ್ಯಾಯಾಧೀಶರು ಇಂತಹ ವಿವಾದಾತ್ಮಕ ಹೇಳಿಕೆಗಳನ್ನು ನೀಡುವುದನ್ನು ತಡೆಯಲು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಹೊರಡಿಸಬೇಕು ಎಂದು ಅರ್ಜಿಯಲ್ಲಿ ಒತ್ತಾಯಿಸಲಾಗಿದೆ. ಆದಾಗ್ಯೂ, ಈ ವಿಷಯದ ಬಗ್ಗೆ ಪಿಐಎಲ್ ಆಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತು.













