Home News Subramanya: ಅರ್ಚಕರ ಮನೆಯಲ್ಲಿ ಕಳ್ಳತನ!!

Subramanya: ಅರ್ಚಕರ ಮನೆಯಲ್ಲಿ ಕಳ್ಳತನ!!

Hindu neighbor gifts plot of land

Hindu neighbour gifts land to Muslim journalist

Subramanya: ಸುಬ್ರಹ್ಮಣ್ಯ ಮಠದಲ್ಲಿ ಅರ್ಚಕರಾಗಿರುವ ಆನಂದ ಭಟ್ ಅವರ ಮನೆಯಲ್ಲಿ ಕಳ್ಳತನವಾಗಿದ್ದು, ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಬ್ರಹ್ಮಣ್ಯ ಮಠದಲ್ಲಿ ಅರ್ಚಕರಾಗಿರುವ ಆನಂದ ಭಟ್(Anand Bhat) ಅವರು ಡಿ. 22ರಂದು ಬೆಳಗಿನ ಜಾವ ಎಂದಿನಂತೆ ಮಠಕ್ಕೆ ತೆರಳಿದ್ದರು. ಬಳಿಕ ಕೆಲಸ ಮುಗಿಸಿಕೊಂಡು ಬೆಳಗ್ಗೆ ಮನೆಗೆ ಬಂದಾಗ ಮನೆಯ ಮುಂಬಾಗಲಿನ ಬೀಗ ಮುರಿದಿರುವುದು ಕಂಡುಬಂದಿತ್ತು. ಮನೆಯ ಒಳಗೆ ಹೋಗಿ ನೋಡಿದಾಗ ಗಾದ್ರೇಜ್ ತೆರೆದಿದ್ದು, ಪರಿಶೀಲಿಸಿದಾಗ ಗಾದ್ರೇಜ್ ಒಳಗಡೆ ಪರ್ಸ್ನಲ್ಲಿಟ್ಟಿದ್ದ ಸುಮಾರು 25 ಸಾವಿರ ರೂ. ಹಣ ಮತ್ತು 1.15 ಲಕ್ಷ ರೂ. ಮೌಲ್ಯದ ಸುಮಾರು 23 ಗ್ರಾಂ ಚಿನ್ನಾಭರಣ ಕಳವಾಗಿರುವುದು ಬೆಳಕಿಗೆ ಬಂದಿದೆ.

ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಧ್ಯ ಸುಬ್ರಹ್ಮಣ್ಯ ಪೊಲೀಸರು ಹಾಗೂ ತನಿಖಾ ತಂಡದೊಂದಿಗೆ ಘಟನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.