Home News R Ashok : ಅಂಬೇಡ್ಕರ್ ಬರೆದ ಸಂವಿಧಾನದಲ್ಲಿ ಜಾತ್ಯಾತೀತ, ಸಮಾಜವಾದ ಪದಗಳೇ ಇಲ್ಲ -ಆರ್ ಅಶೋಕ್...

R Ashok : ಅಂಬೇಡ್ಕರ್ ಬರೆದ ಸಂವಿಧಾನದಲ್ಲಿ ಜಾತ್ಯಾತೀತ, ಸಮಾಜವಾದ ಪದಗಳೇ ಇಲ್ಲ -ಆರ್ ಅಶೋಕ್ ಹೇಳಿಕೆ

Hindu neighbor gifts plot of land

Hindu neighbour gifts land to Muslim journalist

R Ashok : ಸಂವಿಧಾನಕ್ಕೆ 68 ಬಾರಿ ತಿದ್ದುಪಡಿ ತಂದ ಕಾಂಗ್ರೆಸ್‌, ಜಾತ್ಯತೀತ ಪದದ ಬಗ್ಗೆ ಮಾತನಾಡುತ್ತಿದೆ. ಆದರೆ ಬಾಬಾ ಸಾಹೇಬರು ಬರೆದ ಸಂವಿಧಾನದಲ್ಲಿ ಜಾತ್ಯತೀತ ಪದವೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ನಾನು ಒಕ್ಕಲಿಗ ಎಂದು ಗುರುತಿಸಿಕೊಳ್ಳುತ್ತೇನೆ. ಎಲ್ಲರೂ ಅವರ ಜಾತಿಯನ್ನು ಗುರುತಿಸಿಕೊಳ್ಳುತ್ತಾರೆ. ಅಂದಮೇಲೆ ಜಾತ್ಯತೀತ ಎಂಬುದಕ್ಕೆ ಅರ್ಥವಿಲ್ಲ. ಡಾ.ಬಿ.ಆರ್.ಅಂಬೇಡ್ಕರ್‌ ಬರೆದ ಸಂವಿಧಾನದಲ್ಲಿ ಜಾತ್ಯತೀತ ಹಾಗೂ ಸಮಾಜವಾದ ಎಂಬ ಪದ ಎಲ್ಲಿದೆ ಎಂದು ಕಾಂಗ್ರೆಸ್‌ ನಾಯಕರು ತೋರಿಸಲಿ ಎಂದರು.

ಅಲ್ಲದೆ ರಾಹುಲ್‌ ಗಾಂಧಿ ಒಂದು ಕಡೆ ಜಾತಿ ಸಮೀಕ್ಷೆ ಬೇಕೆಂದು ಹೇಳುತ್ತಾರೆ. ನಂತರ ಜಾತ್ಯತೀತ ಎನ್ನುತ್ತಾರೆ. ಜವಹರಲಾಲ್‌ ನೆಹರು ಅವರು ಒಂದನೇ ತಿದ್ದುಪಡಿ ತಂದರು. ಒಟ್ಟು 17 ತಿದ್ದುಪಡಿಗಳನ್ನು ಅವರು ಮಾಡಿದ್ದಾರೆ. ನಂತರ ಬಂದ ಇಂದಿರಾಗಾಂಧಿ 26 ತಿದ್ದುಪಡಿ ಮಾಡಿದ್ದಾರೆ. ಬಾಬಾ ಸಾಹೇಬರ ಮೂಲ ಆಶಯಗಳನ್ನೇ ತಿದ್ದುಪಡಿ ಮಾಡಿದ್ದಾರೆ. ಒಟ್ಟಾರೆಯಾಗಿ ಕಾಂಗ್ರೆಸ್‌ 68 ತಿದ್ದುಪಡಿಗಳನ್ನು ಮಾಡಿದೆ ಎಂದರು.

ಅಲ್ಲದೆ ಆರ್‌ಎಸ್‌ಎಸ್‌ ನಾಯಕ ದತ್ತಾತ್ರೇಯ ಹೊಸಬಾಳೆಯವರು ಹೇಳಿದ್ದು ಕಾಂಗ್ರೆಸ್‌ನವರು ಸೇರಿಸಿದ ಪದಗಳ ಬಗ್ಗೆ. ನಾನು ಒಕ್ಕಲಿಗ ಎಂದು ಗುರುತಿಸಿಕೊಳ್ಳುತ್ತೇನೆ. ಎಲ್ಲರೂ ಅವರ ಜಾತಿಯನ್ನು ಗುರುತಿಸಿಕೊಳ್ಳುತ್ತಾರೆ. ಅಂದಮೇಲೆ ಜಾತ್ಯತೀತ ಎಂಬುದಕ್ಕೆ ಅರ್ಥವಿಲ್ಲ ಎಂದು ಹೇಳಿದರು.

ಇದನ್ನೂ ಓದಿ: Belagavi : ಗೋ ರಕ್ಷಣೆಗೆಂದು ಹೋದ ಹಿಂದೂ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಮರಣಾಂತಿಕಾ ಹಲ್ಲೆ – ವಿಡಿಯೋ ವೈರಲ್