Home News Golden Kalash: ಕೆಂಪು ಕೋಟೆಯಲ್ಲಿ ಚಿನ್ನದ ಕಲಶ ಕದ್ದ ಕಳ್ಳ ಅರೆಸ್ಟ್

Golden Kalash: ಕೆಂಪು ಕೋಟೆಯಲ್ಲಿ ಚಿನ್ನದ ಕಲಶ ಕದ್ದ ಕಳ್ಳ ಅರೆಸ್ಟ್

Hindu neighbor gifts plot of land

Hindu neighbour gifts land to Muslim journalist

Golden Kalash: ಕೆಂಪುಕೋಟೆ ಆವರಣದಲ್ಲಿರುವ ಪಾರ್ಕ್ನಲ್ಲಿ `ದಶಲಕ್ಷಣ ಮಹಾಪರ್ವ’ ಹೆಸರಿನಲ್ಲಿ ಆ.15ರಿಂದ ಸೆ.9ರ ವರೆಗೆ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭ ಜೈನ ಅರ್ಚಕನ ವೇಷದಲ್ಲಿ ಬಂದ ಆರೋಪಿ ಬೆಲೆ ಬಾಳುವ ವಸ್ತುಗಳನ್ನು,ಎರಡು ಚಿನ್ನದ ಕಲಶವನ್ನು ಒಂದು ಚೀಲದಲ್ಲಿ ತುಂಬಿಕೊಂಡು ಹೋಗಿದ್ದ.

ಇದೀಗ ಐತಿಹಾಸಿಕ ಕೆಂಪು ಕೋಟೆ (Red Fort) ಆವರಣದಲ್ಲಿ ನಡೆದ ಜೈನರ ಧಾರ್ಮಿಕ ಕಾರ್ಯಕ್ರಮದಲ್ಲಿ ಎರಡು ಚಿನ್ನದ ಕಲಶವನ್ನು (Golden Kalash) ಕಳ್ಳತನ ಮಾಡಿದ ಆರೋಪಿಯನ್ನು ಉತ್ತರ ಪ್ರದೇಶದ ಅಪರಾಧ ವಿಭಾಗದ ಪೊಲೀಸರು (Crime Branch) ಬಂಧಿಸಿದ್ದಾರೆ.

ಇದನ್ನೂ ಓದಿ:UPI Transaction: ತಪ್ಪಾದ UPI ID ಖಾತೆಗೆ ಹಣ ಹೋದರೆ ಏನು ಮಾಡಬೇಕು?

ಆರೋಪಿಯನ್ನು ಹಾಪುರ್ ನಿವಾಸಿ ಭೂಷಣ್ ವರ್ಮಾ ಎಂದು ಗುರುತಿಸಲಾಗಿದೆ.

ಆರೋಪಿಯು ಜೈನ್ ಧರ್ಮದ ಧಾರ್ಮಿಕ ಕಾರ್ಯಕ್ರಮದಲ್ಲಿ 1.5 ಕೋಟಿ ಮೌಲ್ಯದ ವಜ್ರ, ರತ್ನ ಖಚಿತ ಕಲಶವನ್ನು ಕಳವು ಮಾಡಿದ್ದ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿ, ಬಿಎನ್‌ಎಸ್ ಸೆಕ್ಷನ್ 303 (2)ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.