Home News TET ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಈ ನಿಯಮ ಕಡ್ಡಾಯ!!

TET ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಈ ನಿಯಮ ಕಡ್ಡಾಯ!!

Hindu neighbor gifts plot of land

Hindu neighbour gifts land to Muslim journalist

TET: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ಇದೇ ಡಿಸೆಂಬರ್ 07, 2025 ರಂದು ನಡೆಯಲಿದೆ. ಈಗಾಗಲೇ ಇಲಾಖೆಯು ಪ್ರವೇಶ ಪತ್ರಿಕೆಯನ್ನು ಕೂಡ ಬಿಡುಗಡೆ ಮಾಡಿದ್ದು ಅಭ್ಯರ್ಥಿಗಳಾದ ಡೌನ್ಲೋಡ್ ಮಾಡಿಕೊಳ್ಳುತ್ತಿದ್ದಾರೆ. ಇದರ ಬೆನ್ನಲ್ಲೇ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಇಲಾಖೆಯು ನಿಯಮಗಳನ್ನು ಪ್ರಕಟಿಸಿದೆ.

ಪರೀಕ್ಷೆಯು ಎರಡು ಅವಧಿಯಲ್ಲಿ ನಡೆಯುತ್ತದೆ ಬೆಳಿಗ್ಗೆ 9. 30 ರಿಂದ 12 ಗಂಟೆವರೆಗೆ ಮತ್ತು ಮದ್ಯಾಹ್ನದ 2 ರಿಂದ 4.30 ರ ವರೆಗೆ ಪರೀಕ್ಷೆಯು ನಡೆಯುತ್ತದೆ. ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗಿದೆ. ಪರೀಕ್ಷೆಗೆ ಹಾಜರಾಗುವಂತ ಅಭ್ಯರ್ಥಿಗಳು ಶೂ ಮತ್ತು ಬೆಲ್ಟ್ ಧರಿಸಿ ಬರುವುದನ್ನು ನಿಷೇಧಿಸಲಾಗಿದೆ. ಇದಲ್ಲದೇ ಪ್ರವೇಶ ಪತ್ರದಲ್ಲಿ ತಮ್ಮ ಸಹಿ ಮತ್ತು ಭಾವಚಿತ್ರ ಪ್ರಕಟವಾಗದಿರುವ, ಸಹಿ ಮತ್ತು ಭಾವಚಿತ್ರ ವ್ಯತ್ಯಾಸವಿರುವ ಅಭ್ಯರ್ಥಿಯು ತನ್ನೊಂದಿಗೆ ಆನ್ ಲೈನ್ ಅರ್ಜಿ, ತಮ್ಮ ಇತ್ತೀಚಿನ ಭಾವಷಿತ್ರ ಮತ್ತು ಆಧಾರ್ ಕಾರ್ಡ್, ಇಲ್ಲವೇ ಇತರೆ ಗುರುತಿನ ಚೀಟಿಯನ್ನು ಪರೀಕ್ಷಾ ಕೇಂದ್ರದ ಅಧಿಕಾರಿಗಳಿಗೆ ತೋರಿಸಬೇಕು.

ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದ ಸುತ್ತಲು ಸಿಆರ್ಪಿತಸಿ ಕಲಂ 144 ಜಾರಿಗೊಳಿಸುವಂತೆ, 200 ಮೀಟರ್ ಪ್ರದೇಶದ ಝರಾಕ್ಸ್ ಅಂಗಡಿ ಬಂದ್ ಮಾಡುವಂತೆ ಹಾಗೂ ವಿದ್ಯುತ್ ನಿಲುಗಡೆಯಾಗದಂತೆ ಸೂಚಿಸಲಾಗಿದೆ. ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಯಾವುದೇ ರೀತಿಯ ನಕಲು ಹಾಗೂ ಮೊಬೈಲ್, ಬ್ಲೂಟೂತ್, ಸ್ಮಾರ್ಟ್ ವಾಚ್ ಸೇರಿದಂತೆ ಅತ್ಯಾಧುನಿಕ ತಾಂತ್ರಿಕ ಸಾಧನ ಸಲಕರಣೆಗಳನ್ನು ಪರೀಕ್ಷಾ ಕೊಠಡಿಗೆ ತರದಂತೆ ಮತ್ತು ಬಳಸದಂತೆ ಮುಂಜಾಗೃತೆ ವಹಿಸಬೇಕೆಂದು ತಿಳಿಸಲಾಗಿದೆ.