ಸೋಮವಾರ, 26 ಅಕ್ಟೋಬರ್ 2026
Trending

ಮರಕ್ಕೆ ಬೀದಿನಾಯಿ ಕಟ್ಟಿ ಹಾಕಿ ಕ್ರೂರವಾಗಿ ಹಲ್ಲೆಗೈದು ಹತ್ಯೆ: ಮೂವರು ಪೊಲೀಸ್‌ ವಶಕ್ಕೆ

ಬೆಂಗಳೂರು: ಬೀದಿ ನಾಯಿಯನ್ನು ಮರಕ್ಕೆ ನೇತುಹಾಕಿ ಕ್ರೂರವಾಗಿ ಹಲ್ಲೆ ಮಾಡಿ ಕೊಂದಿರುವ ಆರೋಪದಡಿ ಮೂವರನ್ನು ಇಲ್ಲಿನ ವರ್ತೂರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Sponsored

ಶ್ವಾನ ಪ್ರಿಯೆ ನಿಶ್ಚಿಂತ ನರೇನ್‌ ಎಂಬುವವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಪುನೀತ್‌, ಮುರುಳಿ ಹಾಗೂ ಮುನಿಯಪ್ಪ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ನಿಶ್ಚಿಂತ ಅವರು ದೂರು ನೀಡಿದ್ದರು.

ಸಿಸಿಟಿವಿ ಆಧರಿಸಿ ಎಫ್‌ಐಆರ್‌ ದಾಖಲಿಸಿಕೊಂಡ ಪೊಲೀಸರು ಮೂವರು ಆರೋಪಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.