ಟೈಗರ್ ಶ್ರಾಫ್ ಕಾರಿನ ಮೇಲೆ ಫೈರಿಂಗ್ ಪ್ರಕರಣ: ಆರೋಪಿಗಳ ಫಸ್ಟ್ ಫೋಟೋ ರಿಲೀಸ್

ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಮೇಲೆ ಜುಹು ಪ್ರದೇಶದಲ್ಲಿ ಭಾನುವಾರ ಗುಂಡಿನ ದಾಳಿ ನಡೆಸಿದ ಆರೋಪಿಗಳ ಮೊದಲ ಫೋಟೋ ಬಹಿರಂಗಗೊಂಡಿದೆ. ಈ ಫೋಟದಲ್ಲಿ ಇಬ್ಬರು ಆರೋಪಿಗಳು ಬಿಳಿ ಬಣ್ಣದ ಶರ್ಟ್ ಧರಿಸಿರುವುದು ಕಂಡು ಬಂದಿದ್ದು, ಒಬ್ಬ
ಟೋಪಿ ಹಾಕಿದ್ದಾನೆ.
Sponsoredಆರೋಪಿಗಳ ಗುರುತನ್ನು ಪೊಲೀಸರು ಇನ್ನೂ ಬಹಿರಂಗಗೊಳಿಸಿಲ್ಲ. ಆದರೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನೊಂದಿಗೆ ಸಂಪರ್ಕ ಹೊಂದಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ದಾಳಿಯ ಹೊಣೆ ಹೊತ್ತು ಪೋಸ್ಟ್‌ವೊಂದು ವೈರಲ್ ಆಗಿತ್ತು, ಈ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಈ ಸಂಬಂಧ ಬಿಎನ್‌ಎಸ್ ಅಡಿಯಲ್ಲಿ ಕೊಲೆಯತ್ನ, ಸಾಮಾನ್ಯ ಉದ್ದೇಶ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.




