ಸೋಮವಾರ, 26 ಅಕ್ಟೋಬರ್ 2026
Trending

ದೆವ್ವ ಬಿಡಿಸುವ ನೆಪ, ಮಹಿಳೆಯ ಮೇಲೆ ನಿರಂತರ ಅತ್ಯಾಚಾರ: ದೈವಪಾತ್ರಿ ಅರೆಸ್ಟ್‌

ಬೆಂಗಳೂರು: ಮಾಟ-ಮಂತ್ರ ದೆವ್ವ ಬಿಡಿಸುವ ಹೆಸರಿನಲ್ಲಿ ಮಹಿಳೆಯೊಬ್ಬರ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದ ಆರೋಪದಲ್ಲಿ ಸತೀಶ್‌ ಪಾತ್ರಿ ಎಂಬಾತನನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧನ ಮಾಡಿದ್ದಾರೆ.

Sponsored

ಹಾಸನ ಮೂಲದ ಮಹಿಳೆಯನ್ನು ಕೊಪ್ಪ ತಾಲೂಕಿನ ಮೇಕನಹಾಡ್ಲು ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಸಮೀಪದ ಹಾಗೂ ತೀರ್ಥಹಳ್ಳಿಯ ಕುದುರೆಗುಂಡಿ ಭಾಗಕ್ಕೆ ಕರೆದುಕೊಂಡು ಹೋಗಿ ಆರೋಪಿ ಈ ಕೃತ್ಯ ಎಸಗಿರುವುದಾಗಿ ಸಂತ್ರಸ್ತೆ ಆರೋಪ ಮಾಡಿದ್ದಾರೆ.

Advertisement
Advertisement

ಪ್ರಕರಣ ದಾಖಲಾಗುತ್ತಿದ್ದಂತೆ ಬಂಧನದ ಭೀತಿಯಿಂದ ಪರಾರಿಯಾಗಿದ್ದ ಸತೀಶ್‌ ಪಾತ್ರಿ, ಸತತ ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದ. ಸದ್ಯ ಈತನ ಬಂಧನವಾಗಿದ್ದು, ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಪೊಲೀಸರು ನಡೆಸುತ್ತಿದ್ದಾರೆ.

Advertisement