Home News Tirupati: ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ: ನಾಲ್ವರನ್ನು ಬಂಧಿಸಿದ ಸಿಬಿಐ

Tirupati: ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ: ನಾಲ್ವರನ್ನು ಬಂಧಿಸಿದ ಸಿಬಿಐ

Hindu neighbor gifts plot of land

Hindu neighbour gifts land to Muslim journalist

Tirupati: ತಿರುಪತಿ (Tirupati) ತಿರುಮಲ ಲಡ್ಡು ಪ್ರಸಾದ ತಯಾರಿಸಲು ಬಳಸುವ ಹಸುವಿನ ತುಪ್ಪದಲ್ಲಿ ಕಲಬೆರಕೆ ಮಾಡಿದ ಆರೋಪದ ಮೇಲೆ ಸಿಬಿಐ ತನಿಖಾ ತಂಡ ನಾಲ್ವರನ್ನು ಬಂಧಿಸಿದೆ.

ತಿರುಪತಿ ದೇವಸ್ಥಾನದಲ್ಲಿ ತುಪ್ಪ ಪೂರೈಕೆಯ ಸಮಯದಲ್ಲಿ ಗಂಭೀರ ಉಲ್ಲಂಘನೆಗಳು ಕಂಡುಬಂದಿದ್ದು, ಪ್ರತಿ ಹಂತದಲ್ಲೂ ಅಕ್ರಮಗಳು ನಡೆದಿವೆ ಎಂದು ಟಿಟಿಡಿ ಮೂಲಗಳು ತಿಳಿಸಿದ್ದವು. ಅಂತೆಯೇ ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲಾಗಿತ್ತು.

ಸದ್ಯ ತನಿಖಾಧಿಕಾರಿಗಳು ಅಪರಾಧ ಸಂಖ್ಯೆ ೪೭೦/೨೪ ರ ಅಡಿಯಲ್ಲಿ ಆರೋಪಿಗಳನ್ನು ತಿರುಪತಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಬಂಧಿತರಲ್ಲಿ ಭೋಲೆ ಬಾಬಾ ಡೈರಿ (ರೂರ್ಕಿ, ಉತ್ತರಾಖಂಡ್) ಮಾಜಿ ನಿರ್ದೇಶಕರಾದ ಬಿಪಿನ್ ಜೈನ್ ಮತ್ತು ಪೊಮಿಲ್ ಜೈನ್, ವೈಷ್ಣವಿ ಡೈರಿ (ಪೂನಂಬಕ್ಕಂ) ಸಿಇಒ ಅಪೂರ್ವ ವಿನಯ್ ಕಾಂತ್ ಚಾವ್ಡಾ ಮತ್ತು ಎಆರ್ ಡೈರಿ (ದುಂಡಿಗಲ್) ಎಂಡಿ ರಾಜು ರಾಜಶೇಖರನ್ ಸೇರಿದ್ದಾರೆ.