Home News 60 ಕಿ.ಮೀ ವ್ಯಾಪ್ತಿಯಲ್ಲಿ 2 ಟೋಲ್ ಗೇಟ್ ಇದ್ದರೆ 3 ತಿಂಗಳಲ್ಲಿ ಮುಚ್ಚಲಾಗುತ್ತದೆ-ಗಡ್ಕರಿ

60 ಕಿ.ಮೀ ವ್ಯಾಪ್ತಿಯಲ್ಲಿ 2 ಟೋಲ್ ಗೇಟ್ ಇದ್ದರೆ 3 ತಿಂಗಳಲ್ಲಿ ಮುಚ್ಚಲಾಗುತ್ತದೆ-ಗಡ್ಕರಿ

Hindu neighbor gifts plot of land

Hindu neighbour gifts land to Muslim journalist

ನವದೆಹಲಿ, ಮಾರ್ಚ್ 22; ರಾಷ್ಟ್ರೀಯ ಹೆದ್ದಾರಿಯಲ್ಲಿ 60 ಕಿ. ಮೀ. ವ್ಯಾಪ್ತಿಯೊಳಗೆ ಎರಡು ಟೋಲ್ ಬೂತ್‌ಗಳಿದ್ದರೆ ಒಂದನ್ನು ಮೂರು ತಿಂಗಳಿನಲ್ಲಿ ಮುಚ್ಚಲಾಗುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದರು.

ಮಂಗಳವಾರ ಲೋಕಸಭೆಯಲ್ಲಿ ರಸ್ತೆ ಮತ್ತು ಸಾರಿಗೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಡೆದ ಚರ್ಚೆಯಲ್ಲಿ ಪಾಲ್ಗೊಂಡ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್‌ ಗಡ್ಕರಿ ಟೋಲ್ ಕುರಿತು ಹೇಳಿಕೆ ನೀಡಿದರು.

“60 ಕಿ. ಮೀ. ವ್ಯಾಪ್ತಿಯಲ್ಲಿ ಕೇವಲ ಒಂದು ಟೋಲ್ ಬೂತ್ ಇರಬೇಕು. ಎರಡು ಟೋಲ್ ಬೂತ್ ಇರುವ ಕಡೆ ಅವುಗಳನ್ನು ಮೂರು ತಿಂಗಳಿನಲ್ಲಿ ತೆರವುಗೊಳಿಸಲಾಗುತ್ತದೆ” ಎಂದರು.

ಇಲಾಖೆಯ ಮುಂದಿನ ಯೋಜನೆಗಳ ಬಗ್ಗೆ ಮಾತನಾಡಿದ ಸಚಿವರು, “ದೆಹಲಿ-ಅಮೃತಸರ-ಕಾತ್ರಾ ಎಕ್ಸ್‌ಪ್ರೆಸ್ ವೇ ಯೋಜನೆಯನ್ನು ಈ ವರ್ಷದ ಅಂತ್ಯದೊಳಗೆ ಪೂರ್ಣಗೊಳಿಸಲಾಗುತ್ತದೆ. ಈ ಯೋಜನೆ ಪೂರ್ಣಗೊಂಡರೆ ಕೇವಲ ನಾಲ್ಕು ಗಂಟೆಗಳಲ್ಲಿ ಸಂಚಾರ ನಡೆಸಬಹುದು” ಎಂದು ವಿವರಿಸಿದರು.

ಕೋಲಾರ-ಬೆಂಗಳೂರು ಹೆದ್ದಾರಿ ಟೋಲ್ ಶುಲ್ಕ ಹೆಚ್ಚಳ ಕೋಲಾರ-ಬೆಂಗಳೂರು ಹೆದ್ದಾರಿ ಟೋಲ್ ಶುಲ್ಕ ಹೆಚ್ಚಳ

“ಶ್ರೀನಗರ-ಜಮ್ಮು ರಸ್ತೆಯನ್ನು ಮುಂದಿನ ದಿನಗಳಲ್ಲಿ ಕಾತ್ರಾ-ಅಮೃತಸರ-ದೆಹಲಿ ರಸ್ತೆಗೆ ಸೇರಿಸಲಾಗುತ್ತದೆ. ಇದರಿಂದಾಗಿ ಶ್ರೀನಗರ-ಮುಂಬೈ ನಡುವಿನ ಪ್ರಯಾಣದ ಅವಧಿ 20 ಗಂಟೆಗಳಿಗೆ ಇಳಿಕೆಯಾಗಲಿದೆ” ಎಂದು ನಿತಿನ್ ಗಡ್ಕರಿ ಹೇಳಿದರು.

“ದೆಹಲಿ-ಜೈಪುರ, ದೆಹಲಿ-ಮುಂಬೈ, ದೆಹಲಿ-ಡೆಹ್ರಡೂನ್ ಎಕ್ಸ್‌ಪ್ರೆಸ್ ವೇಗಳನ್ನು ಈ ವರ್ಷದೊಳಗೆ ಪೂರ್ಣಗೊಳಿಸಲಾಗುತ್ತದೆ. ಜೈಪುರ-ಡೆಹ್ರಡೂನ್ ಪ್ರಯಾಣದ ಅವಧಿ 2 ಗಂಟೆಗೆ ಇಳಿಕೆಯಾಗಲಿದೆ. ದೆಹಲಿ-ಮುಂಬೈ ಪ್ರಯಾಣದ ಅವಧಿ 12 ಗಂಟೆ ಆಗಲಿದೆ” ಎಂದರು.

2021ರಲ್ಲಿ ರಾಷ್ಟ್ರೀಯ ಹೆದ್ದಾರಿ ಟೋಲ್‌ಗಳ ಬಗ್ಗೆ ಹೊಸ ಮಾರ್ಗಸೂಚಿ ಹೊರಡಿಸಿತ್ತು. ಟೋಲ್ ಪ್ಲಾಜಾಗಳಲ್ಲಿ ಪ್ರತಿ ವಾಹನಗಳ ಸುಗಮ ಮತ್ತು ತ್ವರಿತ ಸಂಚಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ಹೊರಡಿಸಿದ ಮಾರ್ಗಸೂಚಿ ಅನ್ವಯ ರಾಷ್ಟ್ರೀಯ ಹೆದ್ದಾರಿಗಳ ಟೋಲ್‌ಗಳಲ್ಲಿ ವಾಹನದಟ್ಟಣೆಯ ಸಮಯ ಸೇರಿ ಎಲ್ಲ ಸಮಯದಲ್ಲೂ ಸಹ ಪ್ರತಿ ವಾಹನ 10 ಸೆಕೆಂಡ್ ಮೀರದಂತೆ ಕಾಯುವುದನ್ನು ತಡೆಯಬೇಕು ಎಂದು ಹೇಳಿತ್ತು.

ಮಾರ್ಗಸೂಚಿಯಂತೆ ಟೋಲ್ ಪ್ಲಾಜಾಗಳಲ್ಲಿ 100 ಮೀಟರ್‌ಗಿಂತ ಹೆಚ್ಚು ವಾಹನಗಳು ಸರದಿ ನಿಲ್ಲಲು ಅವಕಾಶವಿಲ್ಲ. ಇದರಿಂದಾಗಿ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ಸಂಚಾರ ಯಾವುದೇ ಅಡೆತಡೆ ಇಲ್ಲದೆ ಮುಂದುವರಿಯುತ್ತದೆ. ಟೋಲ್ ಪ್ಲಾಜಾಗಳಲ್ಲಿ ಫಾಸ್ಟ್ ಟ್ಯಾಗ್ ಶೇ100ರಷ್ಟು ಕಡ್ಡಾಯಗೊಳಿಸಿದ ನಂತರ ಯಾವುದೇ ಕಾಯುವಿಕೆಯ ಸಮಯವು ಉಳಿತಾಯವಾಗಿದೆ ಎಂದು ಪ್ರಾಧಿಕಾರ ಹೇಳಿತ್ತು.

ಒಂದು ವೇಳೆ ಯಾವುದಾದರೂ ಕಾರಣಕ್ಕೆ ಕಾಯುತ್ತಿರುವ ವಾಹನಗಳ ಸರದಿ 100 ಮೀಟರ್‌ಗಿಂತ ಹೆಚ್ಚಾದರೆ ಟೋಲ್ ಬೂತ್‌ಗಳಲ್ಲಿ ವಾಹನಗಳ ಸರದಿ 100 ಮೀಟರ್ ಒಳಗೆ ಬರಲು ಉಳಿದ ವಾಹನಗಳಿಗೆ ಯಾವುದೇ ಟೋಲ್ ಪಾವತಿಸದೇ ಸಂಚರಿಸಲು ಅವಕಾಶವಿದೆ. ಈ ಉದ್ದೇಶಕ್ಕಾಗಿ ಟೋಲ್ ಬೂತ್ ನಲ್ಲಿ ಪ್ರತಿಯೊಂದು ಟೋಲ್ ಮಾರ್ಗದಲ್ಲಿ 100 ಮೀಟರ್ ದೂರದಲ್ಲಿ ಹಳದಿ ಪಟ್ಟಿ ಹಾಕಲಾಗಿದೆ ಎಂದಿತ್ತು.

ಒಟ್ಟಾರೆ ಎನ್ಎಚ್ಎಐ ಟೋಲ್ ಪ್ಲಾಜಾಗಳಲ್ಲಿ ಫಾಸ್ಟ್ ಟ್ಯಾಗ್ ಕಡ್ಡಾಯ ಮಾಡಿರುವ ಪ್ರಮಾಣ ಶೇ 96ರಷ್ಟು ಮತ್ತು ಹಲವು ಪ್ಲಾಜಾಗಳಲ್ಲಿ ಶೇ 99ರಷ್ಟಿದೆ. ದೇಶದಲ್ಲಿ ಬೆಳೆಯುತ್ತಿರುವ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ (ಇಟಿಸಿ) ಪ್ರಮಾಣವನ್ನು ಗಮನದಲ್ಲಿರಿಸಿಕೊಂಡು ಹೊಸ ವಿನ್ಯಾಸ ಟೋಲ್ ಪ್ಲಾಜಾ ಹೊಂದಲು ಹಾಗೂ ಮುಂದಿನ ಹತ್ತು ವರ್ಷಗಳ ವಾಹನ ಅಂದಾಜು ಮಾಡಿ ಟೋಲ್ ಪ್ಲಾಜಾಗಳನ್ನು ನಿರ್ಮಿಸಿ ಪರಿಣಾಮಕಾರಿ ಟೋಲ್ ಸಂಗ್ರಹಕ್ಕೆ ವ್ಯವಸ್ಥೆ ಮಾಡಲಾಗಿದೆ.

ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಜಾರಿಗೆ ಬಂದ ಬಳಿಕ ಫಾಸ್ಟ್ ಟ್ಯಾಗ್ ಅಳವಡಿಕೆ ನಿರಂತರವಾಗಿ ಹೆಚ್ಚಾಗುತ್ತಿದೆ. ಇದು ಟೋಲ್ ಕಾರ್ಯಾಚರಣೆಗಳಲ್ಲಿನ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸಿದೆ.