

Hassan: ತಾಲೂಕಿನ ಮೊಸಳೆ ಹೊಸಹಳ್ಳಿ ಬಳಿ ಶುಕ್ರವಾರ ರಾತ್ರಿ ಗಣೇಶ ನಿಮಜ್ಜನ ಮೆರವಣಿಗೆಗೆ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಅಸುನೀಗಿದ್ದು, ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ. ಈ ಘಟನೆಯಲ್ಲಿ ಮೃತರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಇದನ್ನೂ ಓದಿ :Karnataka: “ಡಯಾಲಿಸಿಸ್” ರೋಗಿಗಳಿಗೆ ಇನ್ಮುಂದೆ ಮನೆಯಲ್ಲೇ ಚಿಕಿತ್ಸೆ ದೊರೆಯಲಿದೆ
ಅಪಘಾತದಲ್ಲಿ ಮೃತಪಟ್ಟವರು ಹಾಗೂ ಗಾಯಾಳುಗಲ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ವೈದ್ಯರ ತಂಡಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ತೀವ್ರ ನಿಗಾ ವಹಿಸಿದ್ದಾರೆ.












