ಮೂಡುಬಿದಿರೆ: ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಬಟ್ಟೆ ಒಣಗಿಸುವ ಸಂದರ್ಭದಲ್ಲಿ ತಂತಿಗೆ ಹೈಟೆನ್ಶನ್ ವಿದ್ಯುತ್ ತಂತಿಯ ಸಂಪರ್ಕ ಉಂಟಾಗಿ ವಿದ್ಯುತ್ ಶಾಕ್ ತಗುಲಿ ತಾಯಿ-ಮಗ ದಾರುಣವಾಗಿ ಸಾವನ್ನಪ್ಪಿದ್ದ ಘಟನೆ ಗುರುವಾರ ನಡೆದಿದೆ.
Sponsoredಮೃತ ದುರ್ದೈವಿಗಳು ಮರ್ಸಿ ಮಸ್ಕರೇನಸ್ (45) ಮತ್ತು ಶೋನ್ ಮಸ್ಕರೇನಸ್ (18).
ಮಗನನ್ನು ರಕ್ಷಣೆ ಮಾಡಲು ಹೋಗಿ ತಾಯಿಗೂ ವಿದ್ಯುತ್ ಪ್ರವಹಿಸಿ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಘಟನೆ ಬೆಳಗ್ಗೆ 7 ರಿಂದ 8 ಗಂಟೆಯ ವೇಳೆಗೆ ಬೆಳಕಿಗೆ ಬಂದಿದ್ದು, ತೋಟದ ಕೆಲಸಕ್ಕೆ ಬಂದ ಕಾರ್ಮಿಕರೊಬ್ಬರು ಸ್ಥಳಕ್ಕೆ ಬಂದಾಗ ಘಟನೆ ಗಮನಕ್ಕೆ ಬಂದಿದೆ.
ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.





