Home News Navin D Padil: ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪುರಸ್ಕಾರ!

Navin D Padil: ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪುರಸ್ಕಾರ!

Hindu neighbor gifts plot of land

Hindu neighbour gifts land to Muslim journalist

Navin D Padil: ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡೀಲ್ (Navin D Padil) ಅವರು ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಲಾಗುವ ವಿಶ್ವಪ್ರಭಾ ಪುರಸ್ಕಾರ-2025ಕ್ಕೆ ಆಯ್ಕೆಯಾಗಿದ್ದಾರೆ.

ಅಂತೆಯೇ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ವತಿಯಿಂದ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರ ಹಾಗೂ ಪ್ರಭಾವತಿ ಶೆಣೈ ಮತ್ತು ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಕತ್ವದಲ್ಲಿ ಫೆ.23ರಂದು ತುಳು ನಾಟಕ ಮತ್ತು ಚಲನಚಿತ್ರ ಕಲಾವಿದ ನವೀನ್ ಡಿ. ಪಡೀಲ್ ಅವರಿಗೆ 2025ನೇ ಸಾಲಿನ 1 ಲಕ್ಷ ರೂ. ಮೊತ್ತದ ಪ್ರತಿಷ್ಠಿತ ವಿಶ್ವಪ್ರಭಾ ಪುರಸ್ಕಾರ ಮಾಡಲಾಯಿತು.