ಬೆಂಗಳೂರು: ತುಮಕೂರು ಜಿಲ್ಲೆಯಲ್ಲಿ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಕುರಿತು ಸದ್ಯ ರಾಜ್ಯ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ತುಮಕೂರು ನಗರ ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ತುಮಕೂರಿನಲ್ಲಿ ಹೊಸ ವಿಮಾನ ನಿಲ್ದಾಣ ಸ್ಥಾಪನೆಗೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.
ಡೇಟ್ ಮಾಡುತ್ತ 67 ವರ್ಷದ ವ್ಯಕ್ತಿಗೆ 1.30 ಲಕ್ಷ ವಂಚನೆ!! ಇಬ್ಬರು ಯುವತಿಯರು ಅರೆಸ್ಟ್
150 ಕಿ.ಮೀ. ನಿಯಮ ಅಡ್ಡಿ ವಿಮಾನ ನಿಲ್ದಾಣ ಸ್ಥಾಪನೆ
ಕೇಂದ್ರದ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣ ನೀತಿಯ ಪ್ರಕಾರ, ಈಗಾಗಲೇ ಇರುವ ಸಿವಿಲ್ ವಿಮಾನ ನಿಲ್ದಾಣದಿಂದ 150 ಕಿ.ಮೀ. ವಾಯು ದೂರದೊಳಗೆ ಮತ್ತೊಂದು ವಿಮಾನ ನಿಲ್ದಾಣ ಸ್ಥಾಪಿಸಲು ಸಾಮಾನ್ಯವಾಗಿ ಅನುಮತಿ ನೀಡುವುದಿಲ್ಲ. ಆದರೆ ವಿಶೇಷ ಸಂದರ್ಭಗಳಲ್ಲಿ ಹಾಲಿ ವಿಮಾನ ನಿಲ್ದಾಣದ ಕಾರ್ಯಾಚರಣೆ ಹಾಗೂ ಹೊಸ ವಿಮಾನ ನಿಲ್ದಾಣದಿಂದ ಉಂಟಾಗಬಹುದಾದ ಪರಿಣಾಮಗಳನ್ನು ಪರಿಶೀಲಿಸಿ ಕೇಂದ್ರ ಸರ್ಕಾರ ಅಂತಿಮ ತೀರ್ಮಾನ ಕೈಗೊಳ್ಳಬಹುದು ಎಂದು ಸಚಿವರು ವಿವರಿಸಿದ್ದಾರೆ.
ಡೇಟ್ ಮಾಡುತ್ತ 67 ವರ್ಷದ ವ್ಯಕ್ತಿಗೆ 1.30 ಲಕ್ಷ ವಂಚನೆ!! ಇಬ್ಬರು ಯುವತಿಯರು ಅರೆಸ್ಟ್
ಅನುದಾನ ಮೀಸಲಿಡುವ ಪ್ರಶ್ನೆಯೇ ಇಲ್ಲ
ತುಮಕೂರು ವಿಮಾನ ನಿಲ್ದಾಣಕ್ಕೆ ಮುಂಬರುವ ಬಜೆಟ್ನಲ್ಲಿ ಹಣ ಮೀಸಲಿಡುವ ಕುರಿತು ಕೇಳಿದ ಪ್ರಶ್ನೆಗೆ, ಸದ್ಯ ಯಾವುದೇ ಯೋಜನೆ ಸರ್ಕಾರದ ಪರಿಶೀಲನೆಯಲ್ಲಿಲ್ಲದ ಕಾರಣ ಅನುದಾನ ಹಂಚಿಕೆಯ ಪ್ರಶ್ನೆಯೂ ಇಲ್ಲ ಎಂದು ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ತುಮಕೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಿಸಬೇಕು ಎಂಬ ಬೇಡಿಕೆ ಹಲವು ರಾಜಕೀಯ ನಾಯಕರಿಂದ ಈ ಹಿಂದೆ ಕೇಳಿಬಂದಿತ್ತು. ಆದರೆ ಸರ್ಕಾರದ ಪ್ರಸ್ತುತ ನಿಲುವಿನಂತೆ, ಈ ಯೋಜನೆ ಇನ್ನೂ ಅಧಿಕೃತವಾಗಿ ಪರಿಗಣನೆಯ ಹಂತಕ್ಕೂ ಬಂದಿಲ್ಲ.




