ಯಾದಗಿರಿ: ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರಕಾರಿ ಶಾಲಾ ಶಿಕ್ಷಕರನ್ನು ಘಟನೆ ನಡೆದ 9 ತಿಂಗಳ ನಂತರ ಶಿಕ್ಷಣ ಇಲಾಖೆ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಯಾದಗಿರಿ ಡಿಡಿಪಿಐ ಚನ್ನಬಸಪ್ಪ ಮುದೋಳ್ ಅವರು ಈ ಅಮಾನತು ಆದೇಶ ಹೊರಡಿಸಿದ್ದಾರೆ.
Sponsoredಹುಣಸಗಿ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕ ಗುರುರಾಜ್ ಜೋಶಿ ಹಾಗೂ ಹುಣಸಗಿ ತಾಲೂಕಿನ ಕುಪ್ಪಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಅಣ್ಣಾಸಾಹೇಬ್ ದೇಶಮುಖ ಎಂದು ಹೇಳಲಾಗಿದೆ.
ಕಳೆದ ನವೆಂಬರ್ನಲ್ಲಿ ವಿಜಯಪುರ ಜಿಲ್ಲೆಯ ತಾಳಿಕೋಟಿ ಪಟ್ಟಣದಲ್ಲಿ ಪಥಸಂಚಲನ ಆಯೋಜನೆ ಮಾಡಲಾಗಿತ್ತು. ಈ ಇಬ್ಬರು ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸರಕಾರಿ ಸೇವೆಯಲ್ಲಿದ್ದುಕೊಂಡು ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದಾರೆ ಆರೋಪಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಮುಖಂಡರು ದೂರನ್ನು ನೀಡಿದ್ದರು.
ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ದೂರನ್ನು ನೀಡಿದ್ದು, ಪ್ರಿಯಾಂಕ್ ಖರ್ಗೆ ಅವರು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿದ್ದರು. ದೂರಿನ ಆಧಾರದಲ್ಲಿ ಇಲಾಖೆ ತನಿಖೆ ನಡೆಸಿದ್ದು, ಇಬ್ಬರನ್ನು ಸೇವೆಯಿಂದ ಅಮಾನತು ಮಾಡಿ ಅಧಿಕೃತ ಆದೇಶ ಈಗ ನೀಡಿದೆ.




