# ಉಡುಪಿ : ಕಾರು- ಲಾರಿ ಭೀಕರ ಅಪಘಾತ, ಚಾಲಕನಿಗೆ ಗಂಭೀರ ಗಾಯ!!!

- Link: https://hosakannada.com/news/udupi-accident-car-and-lorry/
- Published: 2022-06-25T07:47:42+00:00
- Author: ಹೊಸಕನ್ನಡ ನ್ಯೂಸ್

ಉಡುಪಿ : ಉಡುಪಿ ಬ್ರಹ್ಮಾವರ ಮಾಬುಕಳ ಸೇತುವೆ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ಸಂಜೆ
ಕಾರು – ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದೆ.

Sponsored

ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಕಾರು ಚಾಲಕ ಅತಿ ವೇಗದಿಂದ ಕುಂದಾಪುರದಿಂದ ಉಡುಪಿಯತ್ತ ಕಾರು ಚಲಾಯಿಸಿಕೊಂಡು
ಬರುತ್ತಿದ್ದು ನಿಯಂತ್ರಣ ಸಿಗದೆ ರಸ್ತೆ ವಿಭಜಕ ದಾಟಿ ಕುಂದಾಪುರದತ್ತ ಸಾಗುತ್ತಿದ್ದ ಲಾರಿಗೆ
ಡಿಕ್ಕಿ
ಹೊಡೆದಿದ್ದಾನೆ ಎಂದು ತಿಳಿದುಬಂದಿದೆ.

Advertisement

Advertisement

ಇನ್ನು ಈ ಅಪಘಾತದಿಂದ ಕಾರು ನಜ್ಜುಗುಜ್ಜಾಗಿದ್ದು ಕಾರಿನ ಚಾಲಕನ ಕೈ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು
ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಈ ಕುರಿತು ಬ್ರಹ್ಮಾವರ ಆರಕ್ಷಕ ಠಾಣೆಯ ಸಿಬ್ಬಂದಿಗಳು ಘಟನ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿರುವುದಾಗಿ
ತಿಳಿದುಬಂದಿದೆ.

Advertisement
