Home Crime Udupi: 3 ಮುಸ್ಲಿಂ ವಿದ್ಯಾರ್ಥಿನಿಯರಿಂದ ಹಿಂದೂ ಯುವತಿಯ ಅಸಹಜ ವಿಡಿಯೋ ಚಿತ್ರೀಕರಣ ಪ್ರಕರಣ; ಜಿಲ್ಲಾ ಕೋರ್ಟ್‌ಗೆ...

Udupi: 3 ಮುಸ್ಲಿಂ ವಿದ್ಯಾರ್ಥಿನಿಯರಿಂದ ಹಿಂದೂ ಯುವತಿಯ ಅಸಹಜ ವಿಡಿಯೋ ಚಿತ್ರೀಕರಣ ಪ್ರಕರಣ; ಜಿಲ್ಲಾ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸಿದ ಸಿಐಡಿ

Udupi

Hindu neighbor gifts plot of land

Hindu neighbour gifts land to Muslim journalist

Udupi: ಉಡುಪಿಯ ಖಾಸಗಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಡುಪಿ ಜಿಲ್ಲಾ ಕೋರ್ಟ್‌ಗೆ ಸಿಐಡಿ ಡಿವೈಎಸ್‌ಪಿ ಅಂಜುಮಾಲಾರಿಂದ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ.

ಇದನ್ನೂ ಓದಿ : Dakshina Kannada: ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಆರ್‌.ಪದ್ಮರಾಜ್‌, ಉಡುಪಿ-ಚಿಕ್ಕಮಗಳೂರು ಜಯಪ್ರಕಾಶ್‌ ಹೆಗ್ಡೆ ಆಯ್ಕೆ

ವಿಧಿವಿಜ್ಞಾನ ಪ್ರಯೋಗಾಲಯದ ವರದಿಗೆಂದು ಸಿಐಡಿ ಕಾಯುತ್ತಿದ್ದು, ಇದೀಗ ಎಫ್‌ಎಸ್‌ಎಲ್‌ ವರದಿ ಬಂದಿದ್ದು, ಈ ಕಾರಣದಿಂದ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ.

ಇದನ್ನೂ ಓದಿ: Madikeri: ಅನುಮಾನಾಸ್ಪದವಾಗಿ ಯುವಕ ಸಾವು

ಘಟನೆ ವಿವರ:

ಉಡುಪಿ ಜಿಲ್ಲೆಯ ಖಾಸಗಿ ಕಾಲೇಜಿನಲ್ಲಿ 2023 ರ ಜುಲೈ 18 ರಂದು ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಗಳು ವಿಡಿಯೋ ಚಿತ್ರೀಕರಣ ಮಾಡಿದ ಘಟನೆಯೊಂದು ನಡೆದಿದ್ದು, ಇದು ಅನಂತರ ಬಹಳ ದೊಡ್ಡ ವಿವಾದವನ್ನು ಪಡೆದಿತ್ತು. ಅನಂತರ ಸರಕಾರದ ಈ ಘಟನೆಯ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿತ್ತು.

ವಿದ್ಯಾರ್ಥಿನಿಯ ಖಾಸಗಿ ವಿಡಿಯೋ ರೆಕಾರ್ಡ್‌ ಮಾಡಿದ ಗಂಭೀರ ಆರೋಪ ಕೇಳಿ ಬಂದಿತ್ತು. ಮುಸ್ಲಿಂ ವಿದ್ಯಾರ್ಥಿನಿಯರು ತಮ್ಮ ಸಹಪಾಠಿಗಳ ಖಾಸಗಿ ವಿಡಿಯೋ ರೆಕಾರ್ಡ್‌ ಮಾಡಿಕೊಂಡಿದ್ದಾಗಿ ಆರೋಪ ಮಾಡಲಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಕೇಸರಿ ಪಡೆ ಹೋರಾಟ ಕೂಡಾ ಮಾಡಿತ್ತು.

ಹಿಂದೂ ವಿದ್ಯಾರ್ಥಿನಿಯ ಅಸಹಜ ವಿಡಿಯೋ ಚಿತ್ರೀಕರಣ ಮಾಡಿದ ಮೂವರು ಮುಸ್ಲಿಂ ವಿದ್ಯಾರ್ಥಿನಿಯರ ವಿರುದ್ಧ ಎಫ್‌ಐಆರ್‌ ಕೂಡಾ ದಾಖಲು ಮಾಡಲಾಗಿತ್ತು. ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಮೂವರು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದು, ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಮೂವರಿಗೆ ಷರತ್ತುಬದ್ಧ ಜಾಮೀನು ನೀಡಿತ್ತು.