# ಉಡುಪಿ : ಸುತ್ತಿಗೆಯಿಂದ ಹೊಡೆದು ಹೆತ್ತ ತಂದೆ ತಾಯಿಯನ್ನೇ ಕೊಂದ ಪುತ್ರ!!

- Link: https://hosakannada.com/news/udupi-son-kills-his-parents-by-hitting-them-with-a-hammer/
- Published: 2026-08-24T13:33:16+00:00
- Author: ಹೊಸಕನ್ನಡ ನ್ಯೂಸ್

ಮನೆಯಲ್ಲಿ ನಡೆದ ಜಗಳದ ಬಳಿಕ ಮಗನೊಬ್ಬ ತಂದೆ-ತಾಯಿಯ ಮೇಲೆ ಸುತ್ತಿಗೆಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದು,
ಇಬ್ಬರೂ ಮೃತಪಟ್ಟಿರುವ ಘಟನೆ ಉಡುಪಿಯ ಬ್ರಹ್ಮಾವರದ ಗಾಂಧಿನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ.

Sponsored

ಮೃತರನ್ನು ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಅಲಿ ಮತ್ತು ಶಂಶಾದ್ ಬೇಗಂ ಎಂದು ಗುರುತಿಸಲಾಗಿದೆ. ಮೆಹಬೂಬ್
ಅಲಿ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರೆ, ಶಾಹಿದ್ ಅಲಿ ಫುಡ್ ಡೆಲಿವರಿ ಕೆಲಸ ಮಾಡಿಕೊಂಡಿದ್ದ.
ಭಾನುವಾರ ರಾತ್ರಿ ಮನೆಯಲ್ಲಿ ತಂದೆ-ತಾಯಿ ಹಾಗೂ ಶಾಹಿದ್ ನಡುವೆ ಯಾವುದೋ ವಿಚಾರಕ್ಕೆ ಮಾತಿನ ಚಕಮಕಿ
ನಡೆದಿದೆ. ಈ ವೇಳೆ ಕೋಪಗೊಂಡ ಶಾಹಿದ್ ಸುತ್ತಿಗೆಯಿಂದ ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು
ತಿಳಿಸಿದ್ದಾರೆ.

Advertisement

Advertisement

ಘಟನೆ ಬಳಿಕ ಶಾಹಿದ್ ಅಲಿಯೇ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ. ಮಾಹಿತಿ ಪಡೆದ ಬ್ರಹ್ಮಾವರ
ಪೊಲೀಸರು ಸ್ಥಳಕ್ಕೆ ತೆರಳಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಹತ್ಯೆಗೆ ಕಾರಣವಾದ
ನಿಖರ ವಿಚಾರ ಇನ್ನೂ ಸ್ಪಷ್ಟವಾಗಿಲ್ಲ. ಕುಟುಂಬದೊಳಗಿನ ಕಲಹವೇ ಕೃತ್ಯಕ್ಕೆ ಕಾರಣವೇ ಅಥವಾ ಬೇರೆ ಯಾವುದೇ
ಕಾರಣ ಇದೆಯೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು
ಘಟನೆಯ ಸಂಪೂರ್ಣ ಹಿನ್ನೆಲೆ ತಿಳಿಯಲು ತನಿಖೆ ಮುಂದುವರಿಸಿದ್ದಾರೆ.

Advertisement
