ಸೋಮವಾರ, 26 ಅಕ್ಟೋಬರ್ 2026
Trending

ಉಡುಪಿ: ನಡುರಸ್ತೆಯಲ್ಲೇ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ

ಉಡುಪಿ: ನಗರದ ಅತ್ಯಂತ ಜನನಿಬಿಡ ಪ್ರದೇಶವಾದ ಕಲ್ಸಂಕ ಜಂಕ್ಷನ್ನಲ್ಲಿ ಗದಗ ಮೂಲದ ಯುವಕನೋರ್ವ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ ಮಾಡಿದ ಘಟನೆ ನಡೆದಿದೆ.

Sponsored

ಅದೃಷ್ಟವಶಾತ್‌ ದುರಂತವೊಂದು ತಪ್ಪಿದೆ. ಗದಗ ಮೂಲದ ಯುವಕನೊಬ್ಬ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ ಮಾಡಿದ್ದು, ಸಾರ್ವಜನಿಕರಲ್ಲಿ ಭೀತಿಯನ್ನುಂಟು ಮಾಡಿದೆ.

Advertisement
Advertisement

ಕೌಟುಂಬಿಕ ಕಲಹದಿಂದ ಬೇಸತ್ತು ಈ ನಿರ್ಧಾರಕ್ಕೆ ಬಂದಿದ್ದ ಯುವಕ ಸಂಚಾರ ದಟ್ಟಣೆಯ ನಡುವೆ ಈ ರೀತಿ ಮಾಡಲು ಹೋಗಿದ್ದು, ಇದರಿಂದ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆಯಿತ್ತು. ಆದರೆ ಸ್ಥಳದಲ್ಲಿದ್ದ ಪೊಲೀಸರ ಸಮಯಪ್ರಜ್ಞೆಯಿಂದ ಈ ದುರಂತವನ್ನು ತಡೆದಿದ್ದು, ಮುಂದಾಗುವ ಅನಾಹುತವನ್ನು ತಪ್ಪಿಸಿದ್ದಾರೆ.

Advertisement