ಭಾನುವಾರ, 25 ಅಕ್ಟೋಬರ್ 2026

ಉಜಿರೆ: ತುಳುವಿಗೆ 2ನೇ ಆಡಳಿತ ಭಾಷಾ ಸ್ಥಾನಾಮಾನ-ವೀರೇಂದ್ರ ಹೆಗ್ಗಡೆ ಅಭಿನಂದನೆ

Veerendra heggade

ಉಜಿರೆ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದಲ್ಲಿ ಮಂಗಳೂರಿನಲ್ಲಿ ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪ್ರಾಚೀನ ತುಳು ಭಾಷೆಗೆ ಕರ್ನಾಟಕ ರಾಜ್ಯದ ಎರಡನೇ ಆಡಳಿತ ಭಾಷೆಯಾಗಿ ಅಧಿಕೃತ ಸ್ಥಾನಮಾನ ನೀಡಿರುವ ನಿರ್ಧಾರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹರ್ಷ ವ್ಯಕ್ತಪಡಿಸಿದ್ದಾರೆ.

Sponsored

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ದೇಶ ವಿದೇಶಗಳಲ್ಲಿರುವ ತುಳುವರ ಪರವಾಗಿ ರಾಜ್ಯ ಸರಕಾರಕ್ಕೆ ಅವರು ವಿಶೇಷ ಅಭಿನಂದನೆ ಸಲ್ಲಿಸಿದ್ದಾರೆ.

Marriage AdMarriage AdSponsored

ತುಳು ಭಾಷೆಗೆ ಅಧಿಕೃತ ಸ್ಥಾನಮಾನ ದೊರೆತಿರುವುದು ತುಳುವನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಪ್ರಕ್ರಿಯೆಗೂ ಸಹಕಾರಿಯಾಗಲಿದೆ ಎಂದು ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

2009 ರಲ್ಲಿ ಉಜಿರೆಯಲ್ಲಿ ವಿಶ್ವ ತುಳು ಸಮ್ಮೇಳನ ಆಯೋಜಿಸಿ ತುಳು ಭಾಷೆ, ನಾಡು, ನುಡಿ ಹಾಗೂ ಸಂಸ್ಕೃತಿಯ ಕುರಿತು ವಿಶೇಷ ಗಮನ ಸೆಳೆಯಲಾಗಿತ್ತು. ತುಳುಗ್ರಾಮದ ಕಲ್ಪನೆಯು ಆಕರ್ಷಣೆಯ ಕೇಂದ್ರವಾಗಿ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರವಾಗಿತ್ತು ಎಂದು ಅವರು ನೆನಪು ಮಾಡಿಕೊಂಡಿದ್ದಾರೆ.

ರಾಜ್ಯ ಸರಕಾರ ಸಕಾರಾತ್ಮಕವಾಗಿ ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಕುರಿತು ಸ್ಪಂದಿಸಿರುವುದಕ್ಕೆ ತುಳುನಾಡಿನ ಎಲ್ಲಾ ಅಭಿಮಾನಿಗಳ ಪರವಾಗಿ ವಿಶೇಷ ಅಭಿನಂದನೆಗಳನ್ನು ಸಲ್ಲಿಸಿರುವುದಾಗಿ ಡಾ.ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.