# ಉಜಿರೆ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ₹1.10 ಕೋಟಿ ವೆಚ್ಚದಲ್ಲಿ 7,300 ಉಚಿತ ಡಯಾಲಿಸಿಸ್ ಸೇವೆ

- Link: https://hosakannada.com/news/ujire-sdm-hospital-dialisis/
- Published: 2026-10-11T22:44:36+00:00
- Author: ಹೊಸಕನ್ನಡ ನ್ಯೂಸ್

**ಉಜಿರೆ:** ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರ
ನಿರ್ದೇಶನದಂತೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯಲ್ಲಿ ಪ್ರಸಕ್ತ ವರ್ಷದ ಜನವರಿಯಿಂದ
ಸೆಪ್ಟೆಂಬರ್‌ವರೆಗಿನ ಒಂಬತ್ತು ತಿಂಗಳ ಅವಧಿಯಲ್ಲಿ ಒಟ್ಟು **₹1 ಕೋಟಿ 10 ಲಕ್ಷ ವೆಚ್ಚದಲ್ಲಿ 7,300
ಉಚಿತ ಡಯಾಲಿಸಿಸ್ ಸೇವೆಗಳನ್ನು** ಒದಗಿಸಲಾಗಿದೆ.

Sponsored

ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಆರ್ಥಿಕ ಹೊರೆ ತಗ್ಗಿಸುವ ಉದ್ದೇಶದಿಂದ ಈ ಉಚಿತ
ಡಯಾಲಿಸಿಸ್ ಸೇವೆಯನ್ನು ಒದಗಿಸಲಾಗುತ್ತಿದೆ ಎಂದು ಎಸ್.ಡಿ.ಎಂ. ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ(
ಸಿ.ಇ.ಒ.) ಜನಾರ್ದನ ಎಂ. ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement

 

Advertisement
