

ಉಜಿರೆ: ಇಂದು (ಜ.31) ನಿರ್ಮಾಣ ಹಂತದಲ್ಲಿದ್ದ ತಡೆಗೋಡೆಯೊಂದು ಏಕಾಏಕಿ ಕುಸಿದು ಬಿದ್ದ ಪರಿಣಾಮ ಕಾರ್ಮಿಕನೊಬ್ಬ ಸಾವಿಗೀಡಾದ ಘಟನೆ ನಡೆದಿದೆ.
ಬಿಹಾರ ಮೂಲದ ರಾಕೇಶ್ ಕುಮಾರ್ (25) ಎನ್ನುವವರು ಮೃತಪಟ್ಟಿದ್ದಾರೆ.
ಉಜಿರೆಯಿಂದ ಸುರ್ಯ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿದ್ದವೇಳೆ ತಾಲೂಕಿನ ಉಜಿರೆ – ಸುರ್ಯ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ತಡೆಗೋಡೆ ಕುಸಿದು ಬಿದ್ದಿದೆ. ರಾಕೇಶ್ ಕುಮಾರ್ ಮಣ್ಣಿನಡಿಯಲ್ಲಿ ಸಿಲುಕಿದ್ದು ಕೂಡಲೇ ಸ್ಥಳೀಯರು ರಕ್ಷಣೆಗೆ ಧಾವಿಸಿ ಆತನನ್ನು ಹೊರತೆಗೆದು ತುರ್ತು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಮೃತಪಟ್ಟಿದ್ದಾರೆ.
ಇಬ್ಬರು ಕಾರ್ಮಿಕರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.ಮೃತದೇಹ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.













