ಶನಿವಾರ, 24 ಅಕ್ಟೋಬರ್ 2026

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ!!

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ಶುಕ್ರವಾರ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ರವನೀತ್ ಸಿಂಗ್ ಬಿಟ್ಟು ಅವರು ಮುಂದಿನ ವರ್ಷ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬುತ್ತಿರುವ ಬೆನ್ನಲ್ಲೇ ರವನೀತ್ ಸಿಂಗ್ ಬಿಟ್ಟು ರೈಲ್ವೆ ಖಾತೆ ರಾಜ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

“ಪ್ರಧಾನಿಯವರ ಸಲಹೆಯಂತೆ ಭಾರತದ ರಾಷ್ಟ್ರಪತಿಗಳು, ಪ್ರಧಾನಿಯವರ ಸಲಹೆಯಂತೆ, ರವನೀತ್ ಸಿಂಗ್ ಅವರ ಕೇಂದ್ರ ಸಚಿವ ಮಂಡಳಿಯ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ, ಭಾರತದ ಸಂವಿಧಾನದ 75 ನೇ ವಿಧಿಯ ಷರತ್ತು (2) ರ ಅಡಿಯಲ್ಲಿ ಅಂಗೀಕರಿಸಿದ್ದಾರೆ” ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಅವರ ಮೊಮ್ಮಗ, ಅವರು 2024 ರಲ್ಲಿ ಬಿಜೆಪಿಗೆ ಸೇರಿದರು. ಬಳಿಕ ಅದೇ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲುಂಡರು. ಆದರೆ ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಅವರಿಂದ ತೆರವಾದ ಸ್ಥಾನಕ್ಕೆ ರಾಜಸ್ಥಾನದಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡು ಮಂತ್ರಿಯಾದರು.