

C M Siddaramaiah: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ನಾಮಕರಣ ಸಂಬಂಧಪಟ್ಟ ಪ್ರಸ್ತಾವನೆಯನ್ನು ಮುಂದಿನ ಸಚಿವ ಸಂಪುಟ ಸಭೆಯ ಮುಂದೆ ಮಂಡಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಸಾಮಾಜಿಕ ನ್ಯಾಯದ ಪ್ರವರ್ತಕರಾದ ವಿಶ್ವಗುರು ಬಸವಣ್ಣ, ಕೀರ್ತನೆಗಳ ಮೂಲಕ ಸಾಮಾಜಿಕ ಜಾಗೃತಿಯನ್ನು ಮೂಡಿಸಿದ ಕನಕದಾಸರು, ಆಧುನಿಕ ಕರ್ನಾಟಕ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ ನಾಲ್ವಡಿ ಕೃಷ್ಣರಾಜ ಒಡೆಯತ್ ಹಾಗೂ ಪರಿವರ್ತನೆಯ ಹರಿಕಾರರಾದ ಡಿ.ದೇವರಾಜ ಅರಸು ಅವರ ಹೆಸರುಗಳನ್ನು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ನಾಮಕರಣ ಮಾಡುವ ಕುರಿತು ಸೂಚನೆ ನೀಡಿದ್ದಾರೆ.













