ಸೋಮವಾರ, 26 ಅಕ್ಟೋಬರ್ 2026
Trending

ವಿಶ್ವವಿದ್ಯಾನಿಲಯ ಮಟ್ಟದ ಯೂತ್ ರೆಡ್‌ಕ್ರಾಸ್ ಪ್ರೇರಣಾ ಶಿಬಿರ-2026: ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗೆ ಪ್ರಶಸ್ತಿ

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್‌ಕ್ರಾಸ್ ಘಟಕ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ (ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಶಾಖೆ) ಹಾಗೂ ಸುಬ್ರಹ್ಮಣ್ಯದ ಕೆ.ಎಸ್.ಎಸ್. ಕಾಲೇಜಿನ ಸಹಯೋಗದಲ್ಲಿ,ಸುಬ್ರಹ್ಮಣ್ಯದ ಕೆ.ಎಸ್.ಎಸ್. ಕಾಲೇಜಿನಲ್ಲಿ ಅಕ್ಟೋಬರ್ 8ರಿಂದ 10ರವರೆಗೆ ನಡೆದ ಮೂರು ದಿನಗಳ ಪ್ರೇರಣಾ ಶಿಬಿರದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ತೃತೀಯ ಬಿ.ಕಾಂ ವಿದ್ಯಾರ್ಥಿ ಅಹಮ್ಮದ್ ಜೌಹರ್ ಹಾಗೂ ಪ್ರಥಮ ಬಿ.ಎಸ್ಸಿ ವಿದ್ಯಾರ್ಥಿನಿ ಮನೋನ್ಮಯಿ ಭಾಗವಹಿಸಿ ಆಶುಭಾಷಣ ಸ್ಪರ್ಧೆಯಲ್ಲಿ ಅಹಮ್ಮದ್ ಜೌಹರ್ ದ್ವಿತೀಯ ಬಹುಮಾನ ಗಳಿಸಿ, ಇಬ್ಬರು ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಇವರು ಪ್ರತಿನಿಧಿಸಿದ್ದ ತಂಡವು ಸ್ಪರ್ಧೆಯಲ್ಲಿ ‘ಅತ್ಯುತ್ತಮ ತಂಡ’ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಆಡಳಿತ ಮಂಡಳಿ ಹಾಗೂ ಪ್ರಾಧ್ಯಾಪಕರು ಶುಭ ಹಾರೈಸಿದ್ದಾರೆ.

Sponsored